ಸಿ.ಟಿ.ರವಿ ವಿರುದ್ಧದ ಪ್ರಕರಣ: ಆತುರದ ಕ್ರಮ ಬೇಡ; ಹೈಕೋರ್ಟ್
ಬೆಂಗಳೂರು:‘ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೋಮು ದ್ವೇಷದ ಹೇಳಿಕೆ ನೀಡಿದ ಆರೋಪದಡಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು’ ಎಂದು ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.ತಮ್ಮ ವಿರುದ್ಧ ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂ
ಬೆಂಗಳೂರು:‘ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೋಮು ದ್ವೇಷದ ಹೇಳಿಕೆ ನೀಡಿದ ಆರೋಪದಡಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು’ ಎಂದು ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.ತಮ್ಮ ವಿರುದ್ಧ ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಸಿ.ಟಿ.ರವಿ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.ವಿಚಾರಣೆ ವೇಳೆ ರಾಜ್ಯ ಪ್ರಾಸಿಕ್ಯೂಟರ್ ಬಿ.ಎನ್. ಜಗದೀಶ್ ಅವರು, ‘ಪೊಲೀಸರು ನೋಟಿಸ್ ನೀಡಲು ತೆರಳಿದ್ದಾಗ ಅರ್ಜಿದಾರರು ಸರಿಯಾಗಿ ಸ್ಪಂದಿಸಿಲ್ಲ. ತಮ್ಮ ಬೆಂಬಲಿಗರ ಜತೆ ಕುಳಿತು ಕಾಂಗರೂ ಕೋರ್ಟ್ ನಡೆಸಿ, ನೋಟಿಸ್ ನೀಡಲು ತೆರಳಿದ್ದ ಅಧಿಕಾರಿಗಳನ್ನೇ ನಿಂದಿಸಿ, ಬೆದರಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೊ ಸಹ ನಮ್ಮ ಬಳಿ ಇದೆ’ ಎಂದು ದೂರಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಿ.ಟಿ. ರವಿ ಪರ ಪದಾಂಕಿತ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ‘ಯಾರ ಭಾವನೆಗೂ ಧಕ್ಕೆ ತರುವ ಕೆಲಸವಾಗಿಲ್ಲ. ಮೂರನೇ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ’ ಎಂದರು.ಕೆಲಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ 31ಕ್ಕೆ ಮುಂದೂಡಿತು.