ಕಾರು ಅಪಘಾತ; ದಾವಣಗೆರೆಯ ಕಬಡ್ಡಿ ಆಟಗಾರ ಟೆಲಿಕಾಂ ಸುರೇಶ್ ಸಾವು
ಶಿವಮೊಗ್ಗ: ತಾಲ್ಲೂಕಿನ ಆಯನೂರು-ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಮಂಗಳವಾರ ಬೆಳಿಗ್ಗೆ ಕಾರು ಅಪಘಾತ ಸಂಭವಿಸಿ ದಾವಣಗೆರೆಯ ಬಿಎಸ್ಎನ್ಎಲ್ ನಿವೃತ್ತ ಉದ್ಯೋಗಿ, ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ ಸುರೇಶ್ (ಟೆಲಿಕಾಂ ಸುರೇಶಣ್ಣ) (65) ಸ್ಥಳದಲ್ಲೇ ಸಾವನಪ್ಪಿದ್ದಾರೆ.ಅನಾರೋಗ್ಯದ ಕಾರಣ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮಗನೊಂದಿಗೆ ಮಾರುತಿ ಸ್ವಿಫ್ಟ್
ಶಿವಮೊಗ್ಗ: ತಾಲ್ಲೂಕಿನ ಆಯನೂರು-ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಮಂಗಳವಾರ ಬೆಳಿಗ್ಗೆ ಕಾರು ಅಪಘಾತ ಸಂಭವಿಸಿ ದಾವಣಗೆರೆಯ ಬಿಎಸ್ಎನ್ಎಲ್ ನಿವೃತ್ತ ಉದ್ಯೋಗಿ, ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ ಸುರೇಶ್ (ಟೆಲಿಕಾಂ ಸುರೇಶಣ್ಣ) (65) ಸ್ಥಳದಲ್ಲೇ ಸಾವನಪ್ಪಿದ್ದಾರೆ.ಅನಾರೋಗ್ಯದ ಕಾರಣ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮಗನೊಂದಿಗೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ದಾವಣಗೆರೆಗೆ ವಾಪಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.ಕಾರನ್ನು ಸುರೇಶ್ ಅವರ ಪುತ್ರ ಚಲಾಯಿಸುತ್ತಿದ್ದರು. ಆಯನೂರು ರಸ್ತೆಯ ಹೊಸೂರು ದರ್ಗಾ ಸಮೀಪ ತಲುಪುತ್ತಿದ್ದಂತೆ, ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ಎಡಭಾಗದಲ್ಲಿದ್ದ ಮೋರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡ ಸುರೇಶ್ ಮೃತಪಟ್ಟಿದ್ದಾರೆ.ಘಟನೆ ತಿಳಿಯುತ್ತಿದ್ದಂತೆಯೇ ಕುಂಸಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read the complete story at Prajavani