ಪಿಒಕೆಯಲ್ಲಿ ಚುನಾವಣೆ ಹಿಂಸಾಚಾರ: ಮತಪೆಟ್ಟಿಗೆಗೆ ಬೆಂಕಿ, ವ್ಯಕ್ತಿಯ ಕೊಲೆ
ಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಸೋಮವಾರ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಭಾರಿ ಹಿಂಸಾಚಾರ ನಡೆದಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.ರಾಜಕೀಯ ಪಕ್ಷಗಳ ಕಾರ್ಯಕರ್ತರು ಹಾಗೂ ಭದ್ರತಾ ಪಡೆಗಳ ನಡುವೆ ಘರ್ಷಣೆ ಉಂಟಾಗಿದ್ದು, ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.ಪಿಒಕೆ ಶಾಸನಸಭೆ ಚುನಾವಣೆಯಲ್

ಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಸೋಮವಾರ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಭಾರಿ ಹಿಂಸಾಚಾರ ನಡೆದಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.ರಾಜಕೀಯ ಪಕ್ಷಗಳ ಕಾರ್ಯಕರ್ತರು ಹಾಗೂ ಭದ್ರತಾ ಪಡೆಗಳ ನಡುವೆ ಘರ್ಷಣೆ ಉಂಟಾಗಿದ್ದು, ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.ಪಿಒಕೆ ಶಾಸನಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಸುಮಾರು 38 ಲಕ್ಷ ಮತದಾರರು ಅರ್ಹತೆ ಹೊಂದಿದ್ದಾರೆ. ಹಲವು ವಾರಗಳಿಂದ ನಡೆದ ಹಿಂಸಾತ್ಮಕ ಪ್ರತಿಭಟನೆ ಮತ್ತು ಘರ್ಷಣೆ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿದ ಮತದಾನವನ್ನು ಮೂರು ಹಂತಗಳಲ್ಲಿ ನಡೆಸಲಾಗುತ್ತಿದೆ.ಮೊದಲ ಹಂತದ ಮತದಾನ ಮಿರ್ಪುರ ವಿಭಾಗದಲ್ಲಿ ಬಿಗಿ ಭದ್ರತೆಯ ನಡುವೆ ಆರಂಭವಾಯಿತಾದರೂ, ಮಧ್ಯಾಹ್ನದ ವೇಳೆಗೆ ಅಲ್ಲಲ್ಲಿ ಪ್ರತಿಭಟನೆಗಳು ನಡೆದಿದ್ದರಿಂದ ನಾಗರಿಕರು ಮತ್ತು ಭದ್ರತಾಪಡೆಗಳ ಮಧ್ಯೆ ಘರ್ಷಣೆ ಉಂಟಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಭಿಂಬರ್ ಪ್ರದೇಶದ ಮತಗಟ್ಟೆಯೊಂದರಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಏರ್ಪಟ್ಟು, ಮತಪೆಟ್ಟಿಗೆಗೆ ಬೆಂಕಿ ಹಚ್ಚಲಾಗಿದೆ ಎಂದು ಪಾಕಿಸ್ತಾನಿ ಮಾಧ್ಯಮಗಳು ವರದಿ ಮಾಡಿವೆ.ಕೋಟ್ಲಿ ಜಿಲ್ಲೆಯ ನಕ್ಯಾಲ್ನಲ್ಲಿ ನಡೆದ ಮತ್ತೊಂದು ಗಲಾಟೆಯಲ್ಲಿ ತಮ್ಮ ಪಕ್ಷದ ಕಾರ್ಯಕರ್ತ ಮುಖ್ತಾರ್ ಯೂನಸ್ ಕೊಲೆಯಾಗಿದ್ದಾರೆ ಎಂದು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಆರೋಪಿಸಿದೆ.