ಮೀನುಮರಿ ಪಾಲನೆದಾರರಿಂದ ಅರ್ಜಿ ಆಹ್ವಾನ - ಬೆಂಗಳೂರು ದಕ್ಷಿಣ ಜಿಲ್ಲಾ ವಲಯ ಯೋಜನೆ
ರಾಮನಗರ: ಮೀನುಗಾರಿಕೆ ಇಲಾಖೆಯಿಂದ 2026-27ನೇ ಸಾಲಿನಲ್ಲಿ ಜಿಲ್ಲಾ ವಲಯ ಯೋಜನೆಯಡಿ ಬೆಂಗಳೂರು ದಕ್ಷಿಣ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ಕೆರೆಗಳಿಗೆ ಬಲಿತ/ಬಿತ್ತನೆ ಮೀನುಮರಿಗಳನ್ನು ಸರ್ಕಾರ ನಿಗಧಿಪಡಿಸಿರುವ ದರಗಳಲ್ಲಿ (ಸಾಗಾಣಿಕೆ ವೆಚ್ಚ ಸೇರಿ)ಅನುದಾನ ಲಭ್ಯತೆಗೆ ಅನುಗುಣವಾಗಿ ಸರಬರಾಜು ಮಾಡಲು ಮೀನುಗಾರಿಕೆ ಇಲಾಖೆಯಲ್ಲಿ ನೋಂದಾಯಿಸಿರುವ ಆಸಕ್ತ ಮೀನುಮರಿ ಪಾಲನೆದಾರ

ರಾಮನಗರ: ಮೀನುಗಾರಿಕೆ ಇಲಾಖೆಯಿಂದ 2026-27ನೇ ಸಾಲಿನಲ್ಲಿ ಜಿಲ್ಲಾ ವಲಯ ಯೋಜನೆಯಡಿ ಬೆಂಗಳೂರು ದಕ್ಷಿಣ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ಕೆರೆಗಳಿಗೆ ಬಲಿತ/ಬಿತ್ತನೆ ಮೀನುಮರಿಗಳನ್ನು ಸರ್ಕಾರ ನಿಗಧಿಪಡಿಸಿರುವ ದರಗಳಲ್ಲಿ (ಸಾಗಾಣಿಕೆ ವೆಚ್ಚ ಸೇರಿ)ಅನುದಾನ ಲಭ್ಯತೆಗೆ ಅನುಗುಣವಾಗಿ ಸರಬರಾಜು ಮಾಡಲು ಮೀನುಗಾರಿಕೆ ಇಲಾಖೆಯಲ್ಲಿ ನೋಂದಾಯಿಸಿರುವ ಆಸಕ್ತ ಮೀನುಮರಿ ಪಾಲನೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.ಸ್ಪಾನ್ ಮೀನುಮರಿಗಳನ್ನು ಸರ್ಕಾರಿ ಮೀನುಮರಿ ಉತ್ಪಾದನಾ ಕೇಂದ್ರಗಳಿಂದ ಕಡ್ಡಾಯವಾಗಿ ಖರೀದಿಸಿ ಪಾಲನೆ ಮಾಡಿರಬೇಕು. ಅರ್ಜಿ ನಮೂನೆಯನ್ನು ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರಿಂದ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಆ. 17ರ ಸಂಜೆ 5.30ರೊಳಗೆ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260728-14-975168027