ಪೊಲೀಸ್ ಕಾನ್ಸ್ಟೆಬಲ್ ಹುದ್ದೆ: 4.54 ಲಕ್ಷ ಅರ್ಜಿ
ಬೆಂಗಳೂರು: ಖಾಲಿ ಇರುವ 3,991 ಪೊಲೀಸ್ ಕಾನ್ಸ್ಟೆಬಲ್ (ಸಿವಿಲ್) ಹುದ್ದೆಗಳ ನೇಮಕಾತಿಗೆ 4.54 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ.ನೇಮಕಾತಿಯ ಲಿಖಿತ ಪರೀಕ್ಷೆ ಆ.2ರಂದು ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕಲ್ಪಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ನಿಗಾ, ಮುಖಚಹರೆ ಗುರುತಿಸುವಿಕೆ, ಜಾಮರ್ಗಳು ಹಾಗೂ

ಬೆಂಗಳೂರು: ಖಾಲಿ ಇರುವ 3,991 ಪೊಲೀಸ್ ಕಾನ್ಸ್ಟೆಬಲ್ (ಸಿವಿಲ್) ಹುದ್ದೆಗಳ ನೇಮಕಾತಿಗೆ 4.54 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ.ನೇಮಕಾತಿಯ ಲಿಖಿತ ಪರೀಕ್ಷೆ ಆ.2ರಂದು ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕಲ್ಪಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ನಿಗಾ, ಮುಖಚಹರೆ ಗುರುತಿಸುವಿಕೆ, ಜಾಮರ್ಗಳು ಹಾಗೂ ಅಭ್ಯರ್ಥಿಗಳ ತಪಾಸಣೆ ವ್ಯವಸ್ಥೆ ಇರಲಿದೆ. ಈ ಬಾರಿ ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆಯನ್ನು ಜಿಲ್ಲಾಧಿಕಾರಿ ಬದಲಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಿರ್ವಹಿಸಲಿದ್ದಾರೆ.ಒಟ್ಟು ಹುದ್ದೆಗಳಲ್ಲಿ 2,664 ಪುರುಷರಿಗೆ, 888 ಮಹಿಳೆಯರಿಗೆ, 40 ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಮೀಸಲಾಗಿದ್ದು, ಉಳಿದ ಹುದ್ದೆಗಳು ಸೇವಾನಿರತ ಪುರುಷ ಮತ್ತು ಮಹಿಳಾ ಸಿಬ್ಬಂದಿಗೆ ಮೀಸಲಾಗಿವೆ.ಪರೀಕ್ಷೆ ಬರೆಯುತ್ತಿರುವ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಎಲ್ಲ ಅಭ್ಯರ್ಥಿಗಳು ಹೊಸದಾಗಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬೇಕು. ಈ ಹಿಂದೆ ಮಾಡಿಕೊಂಡಿದ್ದರೂ ಹೊಸದಾಗಿ ಡೌನ್ಲೋಡ್ ಮಾಡಿಕೊಳ್ಳಬೇಕು ಎಂದು ಕೆಇಎ ಹೇಳಿದೆ.
Read the complete story at Prajavani