ರಾಜ್ಯದಲ್ಲಿ ಬರ, ದೆಹಲಿಯಲ್ಲಿ ಸಿಎಂ: ಬಿಜೆಪಿ ಸಂಸದ ಪೂಜಾರಿ ಕಿಡಿ
ನವದೆಹಲಿ: ರಾಜ್ಯದಲ್ಲಿ ಬರಗಾಲವಿದ್ದು ಕುಡಿಯಲು ನೀರಿಲ್ಲದೆ ಜನರು ಗುಳೆ ಹೋಗುತ್ತಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಯಲ್ಲೂ ಮುಖ್ಯಮಂತ್ರಿಗಳು ದೆಹಲಿಯಲ್ಲಿ ಕ್ಯಾಂಪ್ ಮಾಡುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಪ್ರಸ್ತುತ ಬರ ಪರಿಸ್ಥಿತಿ, ಕಾವೇರಿ ಜ

ನವದೆಹಲಿ: ರಾಜ್ಯದಲ್ಲಿ ಬರಗಾಲವಿದ್ದು ಕುಡಿಯಲು ನೀರಿಲ್ಲದೆ ಜನರು ಗುಳೆ ಹೋಗುತ್ತಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಯಲ್ಲೂ ಮುಖ್ಯಮಂತ್ರಿಗಳು ದೆಹಲಿಯಲ್ಲಿ ಕ್ಯಾಂಪ್ ಮಾಡುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಪ್ರಸ್ತುತ ಬರ ಪರಿಸ್ಥಿತಿ, ಕಾವೇರಿ ಜಲ ವಿವಾದ ಹಾಗೂ ಸಂಸತ್ತಿನ ಕಲಾಪಗಳ ಕುರಿತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ರಾಜ್ಯದಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದ್ದು, ಜನಸಾಮಾನ್ಯರು ಕಷ್ಟದಲ್ಲಿದ್ದಾರೆ. ಇದರ ನಡುವೆ ಕಾವೇರಿ ಜಲ ವಿವಾದವೂ ಮತ್ತೆ ಮುನ್ನೆಲೆಗೆ ಬಂದಿದ್ದು, ಇದು ಹೀಗೆಯೇ ಮುಂದುವರಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುವ ಭೀತಿ ಇದೆ. ಇಂತಹ ಸೂಕ್ಷ್ಮ ಸಮಯದಲ್ಲಿ ಮುಖ್ಯಮಂತ್ರಿಗಳು ದೆಹಲಿಯಲ್ಲಿ ಬಂದು ಕೂತಿದ್ದಾರೆ. ರಾಹುಲ್ ಗಾಂಧಿ ಅವರು ಇವರನ್ನು ಗಂಭೀರವಾಗಿ ಪರಿಗಣಿಸುತ್ತಿದ್ದಾರೋ ಇಲ್ಲವೋ ಗೊತ್ತಿಲ್ಲ, ಆದರೆ ಮುಖ್ಯಮಂತ್ರಿಗಳು ವಾರಗಟ್ಟಲೇ ದೆಹಲಿಯಲ್ಲೇ ಉಳಿದರೆ ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ಕುಸಿಯಲಿದೆ. ಸಿಎಂ ಕೂಡಲೇ ಬೆಂಗಳೂರಿಗೆ ಹಿಂತಿರುಗಿ, ಆಡಳಿತ ವ್ಯವಸ್ಥೆಯನ್ನು ಸರಿದಾರಿಗೆ ತಂದು ಬರ ಪರಿಹಾರಕ್ಕೆ ಕಾರ್ಯಪ್ರವೃತ್ತರಾಗಬೇಕು" ಎಂದು ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದರು.ಕಾವೇರಿ ಜಲ ವಿವಾದದ ವಿಚಾರವಾಗಿ ಮಾತನಾಡಿದ ಅವರು, ನೀರು ನಿರ್ವಹಣಾ ಪ್ರಾಧಿಕಾರಗಳು ತಮ್ಮದೇ ಆದ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿನ ಒತ್ತಡಕ್ಕೆ ಮಣಿಯದೆ ರಾಜ್ಯದ ಹಿತರಕ್ಷಣೆಯನ್ನು ಕಾಯುವುದು ಮುಖ್ಯಮಂತ್ರಿಗಳ ಜವಾಬ್ದಾರಿಯಾಗಿದೆ. ರಾಜ್ಯದ ನೀರು ಮತ್ತು ರೈತರ ಹಿತವನ್ನು ಕಾಯುವ ಯಾವುದೇ ನಿರ್ಧಾರಕ್ಕೆ ನಮ್ಮ ಸಂಪೂರ್ಣ ಬೆಂಬಲವಿರಲಿದೆ ಎಂದು ಅವರು ತಿಳಿಸಿದರು