ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಯುವತಿ ವಿರುದ್ಧ ಎಫ್ಐಆರ್
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ (NEET Question Paper) ಸೋರಿಕೆ ವಿರುದ್ಧ ಕಾಕ್ರೋಚ್ ಜನತಾ ಪಕ್ಷ (CJP) ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ (PM Modi) ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ ಆರೋಪದ ಮೇಲೆ 25 ವರ್ಷದ ಮಹಿಳೆಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರೋಪಿತೆಯನ್ನು ರುಚಿಕಾ ಸಿಂಗ್ ಎಂದು ಗುರುತಿಸಲಾಗಿದೆ. ಜುಲೈ 23

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ (NEET Question Paper) ಸೋರಿಕೆ ವಿರುದ್ಧ ಕಾಕ್ರೋಚ್ ಜನತಾ ಪಕ್ಷ (CJP) ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ (PM Modi) ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ ಆರೋಪದ ಮೇಲೆ 25 ವರ್ಷದ ಮಹಿಳೆಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರೋಪಿತೆಯನ್ನು ರುಚಿಕಾ ಸಿಂಗ್ ಎಂದು ಗುರುತಿಸಲಾಗಿದೆ. ಜುಲೈ 23ರಂದು ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ವೇಳೆ ಈಕೆ ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾಳೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಬುಧವಾರ ದೂರು ದಾಖಲಾಗಿದ್ದು, ರುಚಿತಾಳ ಹೇಳಿಕೆಗಳು ಪ್ರಧಾನಿಯ ಹುದ್ದೆಯ ಘನತೆಗೆ ಧಕ್ಕೆ ತಂದಿದ್ದು, ಸಾರ್ವಜನಿಕ ಶಾಂತಿ ಹಾಗೂ ಸಾಮರಸ್ಯಕ್ಕೂ ಹಾನಿಯಾಗುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ನೋಯ್ಡಾದ ಎಕ್ಸ್ಪ್ರೆಸ್ವೇ ಪೊಲೀಸ್ ಠಾಣೆಯಲ್ಲಿ ಶಾಂತಿ ಭಂಗಕ್ಕೆ ಪ್ರಚೋದನೆ, ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ಹೇಳಿಕೆ ಹಾಗೂ ಮಾನನಷ್ಟಕ್ಕೆ ಸಂಬಂಧಿಸಿದ ವಿವಿಧ ಕಾನೂನುಗಳ ಅಡಿಯಲ್ಲಿ ಜೀರೋ ಎಫ್ಐಆರ್ ದಾಖಲಿಸಲಾಗಿದೆ. ಬಳಿಕ ಪ್ರಕರಣವನ್ನು ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಸೌರವ್ ದಾಸ್ ಪ್ರತಿಕ್ರಿಯೆ ಈ ಬಗ್ಗೆ ಪ್ರತಿಕ್ರಿಯಿಸಿದ ಸಿಜೆಪಿ ವಕ್ತಾರ ಸೌರವ್ ದಾಸ್, ರುಚಿಕಾ ಸಿಂಗ್ ಬಳಸಿದ ಭಾಷೆ ತಪ್ಪಾಗಿರಬಹುದು. ಆದರೆ ಅದಕ್ಕಾಗಿ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಸರಿಯಲ್ಲ. ಯಾರಿಗಾದರೂ ಹೇಳಿಕೆ ಆಕ್ಷೇಪಾರ್ಹವಾಗಿದ್ದರೆ, ಮಾನನಷ್ಟ ಮೊಕದ್ದಮೆ ಹೂಡಬಹುದು. ಆದರೆ ಪ್ರತಿಭಟನಾಕಾರರ ವಿರುದ್ಧ ಕ್ರಿಮಿನಲ್ ಕಾನೂನು ಬಳಸುವುದು ಸರಿಯಲ್ಲ. ಇದು ಮುಂದಿನ ದಿನಗಳಲ್ಲಿ ಗಂಭೀರ ಪರಿಣಾಮ ಉಂಟುಮಾಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಮಾತನಾಡುವಾಗ ಎಲ್ಲರೂ ತಮ್ಮ ಮಾತುಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಆದರೆ ರಾಜಕೀಯ ಕಾರಣಕ್ಕಾಗಿ ಪೊಲೀಸ್ ಅಧಿಕಾರವನ್ನು ದುರುಪಯೋಗ ಮಾಡಬಾರದು ಎಂದು ದಾಸ್ ಆಗ್ರಹಿಸಿದರು. ಇದನ್ನೂ ಓದಿ: ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಅಂಗೀಕಾರ: ಮತ್ತೊಂದು ವೀಡಿಯೋದಲ್ಲಿ ಮೋದಿ ಅಭಿನಂದನೆ ಪ್ರತಿಭಟನೆಗೆ ಸಂಬಂಧಿಸಿದಂತೆ ಬಂಧಿತರ ವಿರುದ್ಧ, ಅಪರಾಧ ಹಿನ್ನೆಲೆ ಇಲ್ಲದವರ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ದೆಹಲಿ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಮಾತನಾಡಿದ ದೆಹಲಿ ಗೃಹ ಸಚಿವ ಆಶಿಶ್ ಸೂದ್, ವಿದ್ಯಾರ್ಥಿಗಳೊಂದಿಗೆ ಸರ್ಕಾರ ನಿಂತಿದೆ. ಆದರೆ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ದುರುಪಯೋಗಪಡಿಸಿಕೊಂಡು ಹಿಂಸಾಚಾರ ನಡೆಸುವ ಅಥವಾ ಅಪರಾಧ ಹಿನ್ನೆಲೆ ಹೊಂದಿರುವವರ ವಿರುದ್ಧ ಮಾತ್ರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಮೂವರು ಭಾರತೀಯರ ಕಿಡ್ನ್ಯಾಪ್ ಮಾಡಿ ಸುಲಿಗೆಗೆ ಯತ್ನ – ಐವರು ಭಾರತೀಯರು ಥೈಲ್ಯಾಂಡ್ನಲ್ಲಿ ಲಾಕ್