ತಮಿಳುನಾಡಿಗೆ ನೀರು ಹರಿಸಕೂಡದು: ಆರ್.ಅಶೋಕ
ಬೆಂಗಳೂರು: ‘ರಾಜ್ಯದ ಕುಡಿಯುವ ನೀರು ಮತ್ತು ರೈತರ ಹಿತಾಸಕ್ತಿ ಸಂಪೂರ್ಣ ಸುರಕ್ಷಿತವಾಗುವವರೆಗೆ ತಮಿಳುನಾಡಿಗೆ ಒಂದು ಹನಿ ನೀರನ್ನು ಹರಿಸಕೂಡದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.ಈ ಕುರಿತು ‘ಎಕ್ಸ್’ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಕಾವೇರಿ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ

ಬೆಂಗಳೂರು: ‘ರಾಜ್ಯದ ಕುಡಿಯುವ ನೀರು ಮತ್ತು ರೈತರ ಹಿತಾಸಕ್ತಿ ಸಂಪೂರ್ಣ ಸುರಕ್ಷಿತವಾಗುವವರೆಗೆ ತಮಿಳುನಾಡಿಗೆ ಒಂದು ಹನಿ ನೀರನ್ನು ಹರಿಸಕೂಡದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.ಈ ಕುರಿತು ‘ಎಕ್ಸ್’ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಕಾವೇರಿ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.‘ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕರ್ನಾಟಕದ ಮೇಲ್ಮನವಿಯನ್ನು ತಿರಸ್ಕರಿಸಿ, ಮುಂದಿನ 15 ದಿನಗಳ ಕಾಲ ಪ್ರತಿ ದಿನ 3,500 ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂಬ ಆದೇಶವನ್ನು ಯಥಾಸ್ಥಿತಿಯಲ್ಲಿ ಉಳಿಸಿರುವುದು ರಾಜ್ಯದ ಪಾಲಿಗೆ ತೀವ್ರ ಹಿನ್ನಡೆಯಾಗಿದೆ’ ಎಂದು ಅವರು ಹೇಳಿದ್ದಾರೆ.‘ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೇವಲ ಪತ್ರಿಕಾಗೋಷ್ಠಿ ಮತ್ತು ರಾಜಕೀಯ ಹೇಳಿಕೆಗಳಿಗೆ ಸೀಮಿತವಾಗದೇ, ರಾಜ್ಯದ ಪರವಾಗಿ ಕಾನೂನು ಮತ್ತು ಆಡಳಿತಾತ್ಮಕ ಹೋರಾಟ ನಡೆಸಬೇಕಿತ್ತು. ಆದರೆ, ಅವರ ಮೃದು ಧೋರಣೆ ಮತ್ತು ನಿರ್ಲಕ್ಷ್ಯದ ಕಾರಣ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ’ ಎಂದು ಅಶೋಕ ಹೇಳಿದ್ದಾರೆ.ಅಶೋಕ ಅವರ ಆಗ್ರಹ:* ಈ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಕುರಿತು ಪರಿಶೀಲಿಸಬೇಕು* ಮಳೆಯ ಕೊರತೆ ಹಾಗೂ ನೀರಿನ ಅಭಾವದಿಂದ ಈಗಾಗಲೇ ಒಣಗಿ ನೆಲ ಕಚ್ಚಿರುವ ಬೆಳೆಗಳ ಬಗ್ಗೆ ಸರ್ಕಾರ ತಕ್ಷಣವೇ ಸಮಗ್ರ ಬೆಳೆಹಾನಿ ಸಮೀಕ್ಷೆ ನಡೆಸಿ, ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರವನ್ನು ಘೋಷಿಸಬೇಕು*ಕರ್ನಾಟಕದ ಹಕ್ಕಿನ ಒಂದು ಹನಿ ನೀರನ್ನೂ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ರೈತರ ಹಿತ ಮತ್ತು ರಾಜ್ಯದ ಸ್ವಾಭಿಮಾನಕ್ಕಾಗಿ ಸರ್ಕಾರ ನಡೆಸುವ ಯಾವುದೇ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ.