ಲಂಚ ಸ್ವೀಕಾರ ಆರೋಪ; ಕಾರ್ಕಳ ಡಿವೈಎಸ್ಪಿ ಸೇರಿ ಮೂವರು ಪೊಲೀಸರು, ಓರ್ವ ಸಿಬ್ಬಂದಿ ಸಸ್ಪೆಂಡ್
ಉಡುಪಿ: ಕಾರ್ಕಳ ಡಿವೈಎಸ್ಪಿ (Karkala DySP) ಕಚೇರಿಯಲ್ಲಿ ಲಂಚ ಸ್ವೀಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ಕಳ ಡಿವೈಎಸ್ಪಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಹಾಗೂ ಓರ್ವ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು (ಎಎಸ್ಪಿ) ನಡೆಸಿದ ಪ್ರಾಥಮಿಕ ತನಿಖೆಯ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೋಲಿಸ್ ಇಲಾ

ಉಡುಪಿ: ಕಾರ್ಕಳ ಡಿವೈಎಸ್ಪಿ (Karkala DySP) ಕಚೇರಿಯಲ್ಲಿ ಲಂಚ ಸ್ವೀಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ಕಳ ಡಿವೈಎಸ್ಪಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಹಾಗೂ ಓರ್ವ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು (ಎಎಸ್ಪಿ) ನಡೆಸಿದ ಪ್ರಾಥಮಿಕ ತನಿಖೆಯ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೋಲಿಸ್ ಇಲಾಖೆ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಆಪರೇಷನ್ ಫುಟ್ಪಾತ್ ಬಳಿಕ ‘ಆಪರೇಷನ್ ಜೆಸಿಬಿ’ಗೆ ಕೃಷ್ಣ ಬೈರೇಗೌಡ ಕರೆ ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಪೊಲೀಸ್ ಇನ್ಸ್ಪೆಕ್ಟರ್ ಸಂದೀಪ್ ಹಾಗೂ ಡಿವೈಎಸ್ಪಿ ಕಚೇರಿಯ ಸಿಬ್ಬಂದಿ ಶಿವಾನಂದ ಅಮಾನತುಗೊಂಡಿದ್ದಾರೆ. ಇವರ ವಿರುದ್ಧ ಇಲಾಖಾ ಶಿಸ್ತುಕ್ರಮ ಬಾಕಿ ಇರುವ ಹಿನ್ನೆಲೆಯಲ್ಲಿ ಅಮಾನತು ಆದೇಶ ಜಾರಿಗೊಳಿಸಲಾಗಿದ್ದು, ಇಲಾಖಾ ತನಿಖೆ ಪೂರ್ಣಗೊಳ್ಳುವವರೆಗೆ ಅಮಾನತು ಮುಂದುವರಿಯಲಿದೆ. ಪ್ರಕರಣದ ಕುರಿತು ಇಲಾಖಾ ಮಟ್ಟದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಅಂತಿಮ ತನಿಖಾ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ಶಿವಮೊಗ್ಗ | ಹೊಸ KSRTC ಮಾರ್ಗಕ್ಕೆ ಚಾಲನೆ ವೇಳೆ ಖಾಸಗಿ ಬಸ್ ಏಜೆಂಟರಿಂದ ಗಲಾಟೆ