ಉಕ್ರೇನ್ ಮೇಲೆ ರಷ್ಯಾ ದಾಳಿ: 8 ಮಂದಿ ಸಾವು
ಕೀವ್: ಉಕ್ರೇನ್ ಮೇಲೆ ರಷ್ಯಾ ನಡೆಸಿರುವ ದಾಳಿಯಲ್ಲಿ ಕನಿಷ್ಠ ಎಂಟು ಮಂದಿ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗುರುವಾರ ರಾತ್ರಿಯಿಡೀ ಈ ದಾಳಿ ನಡೆದಿದ್ದು, ಪೂರ್ವ ನಿಪ್ರೋಪೆಟ್ರೋವಸ್ಕ್ ಹಾಗೂ ಪಶ್ಚಿಮ ಲಿವೀವ್ ಪ್ರದೇಶಗಳಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ನಿಪ್ರೋಪೆಟ್ರೋವಸ್ಕ್ ಮೇಲೆ ನಡೆದ ದಾಳಿಯಲ್ಲಿ ಆರು ಮಂದಿ ಮೃತಪ

ಕೀವ್: ಉಕ್ರೇನ್ ಮೇಲೆ ರಷ್ಯಾ ನಡೆಸಿರುವ ದಾಳಿಯಲ್ಲಿ ಕನಿಷ್ಠ ಎಂಟು ಮಂದಿ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗುರುವಾರ ರಾತ್ರಿಯಿಡೀ ಈ ದಾಳಿ ನಡೆದಿದ್ದು, ಪೂರ್ವ ನಿಪ್ರೋಪೆಟ್ರೋವಸ್ಕ್ ಹಾಗೂ ಪಶ್ಚಿಮ ಲಿವೀವ್ ಪ್ರದೇಶಗಳಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ನಿಪ್ರೋಪೆಟ್ರೋವಸ್ಕ್ ಮೇಲೆ ನಡೆದ ದಾಳಿಯಲ್ಲಿ ಆರು ಮಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇಲ್ಲಿ ಹಲವು ಮನೆಗಳು ಹಾಗೂ ಮೂಲಸೌಕರ್ಯ ಕೇಂದ್ರಗಳು ಧ್ವಂಸಗೊಂಡಿವೆ ಎಂದು ಸೇನೆಯ ಪ್ರಾದೇಶಿಕ ಮುಖ್ಯಸ್ಥ ಒಲೆಕ್ಸಂದರ್ ಹೇಳಿದರು. ಲಿವೀವ್ನಲ್ಲಿ ಕ್ಷಿಪಣಿ ದಾಳಿಯಿಂದ ಗಾಯಗೊಂಡವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಕೀವ್ನಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Read the complete story at Prajavani