ಮೈಸೂರು: ಜೀವನ ಕೌಶಲ ತರಬೇತಿ, ವಿದ್ಯಾರ್ಥಿಗಳಿಗೆ ಕಿಟ್ ವಿತರಣೆ
ಮೈಸೂರು: ಸಮರ್ಥನಂ ಅಂಗವಿಕಲರ ಸಂಸ್ಥೆಯ ಜೀವನ ಕೌಶಲ ತರಬೇತಿ ಕೇಂದ್ರದ 2026–27ನೇ ಸಾಲಿನ ದ್ವಿತೀಯ ಬ್ಯಾಚ್ ವಿದ್ಯಾರ್ಥಿಗಳಿಗೆ ಸ್ವಾಗತ ಕಿಟ್ ವಿತರಣೆ ಹಾಗೂ ಸ್ವಾಗತ ಸಮಾರಂಭ ಇಲ್ಲಿನ ಕೃಷ್ಣಮೂರ್ತಿಪುರಂನ ನಮನ ಕಲಾಮಂಟಪದಲ್ಲಿ ಗುರುವಾರ ನಡೆಯಿತು.ಮುಖ್ಯ ಅತಿಥಿಯಾಗಿದ್ದ ಕೆ.ಆರ್. ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ.ಎಚ್.ಪಿ. ಶೋಭಾ, ಮಹಿಳೆಯರು ಆರ್ಥಿಕ ಮತ್ತು ಸಾಮಾಜಿಕ

ಮೈಸೂರು: ಸಮರ್ಥನಂ ಅಂಗವಿಕಲರ ಸಂಸ್ಥೆಯ ಜೀವನ ಕೌಶಲ ತರಬೇತಿ ಕೇಂದ್ರದ 2026–27ನೇ ಸಾಲಿನ ದ್ವಿತೀಯ ಬ್ಯಾಚ್ ವಿದ್ಯಾರ್ಥಿಗಳಿಗೆ ಸ್ವಾಗತ ಕಿಟ್ ವಿತರಣೆ ಹಾಗೂ ಸ್ವಾಗತ ಸಮಾರಂಭ ಇಲ್ಲಿನ ಕೃಷ್ಣಮೂರ್ತಿಪುರಂನ ನಮನ ಕಲಾಮಂಟಪದಲ್ಲಿ ಗುರುವಾರ ನಡೆಯಿತು.ಮುಖ್ಯ ಅತಿಥಿಯಾಗಿದ್ದ ಕೆ.ಆರ್. ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ.ಎಚ್.ಪಿ. ಶೋಭಾ, ಮಹಿಳೆಯರು ಆರ್ಥಿಕ ಮತ್ತು ಸಾಮಾಜಿಕವಾಗಿ ಸ್ವಾವಲಂಬಿಗಳಾಗಬೇಕು. ತಂದೆ, ಪತಿ ಅಥವಾ ಮಕ್ಕಳ ಮೇಲೆ ಅವಲಂಬಿತರಾಗದೆ ಸ್ವಸಾಮರ್ಥ್ಯದ ಮೇಲೆ ಜೀವನ ರೂಪಿಸಿಕೊಳ್ಳಬೇಕು ಎಂದರು.ಕೆ.ಆರ್. ಆಸ್ಪತ್ರೆಯಲ್ಲಿ ಅಂಗವಿಕಲರ ಅನುಕೂಲಕ್ಕೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಯುಡಿಐಡಿ ಕಾರ್ಡ್ ಸೇರಿದಂತೆ ವಿವಿಧ ಸೇವೆಗಳನ್ನು ಸುಲಭವಾಗಿ ಪಡೆಯಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಸಂಕೋಚ ಅಥವಾ ಕೀಳರಿಮೆ ಇಲ್ಲದೇ ಆಸ್ಪತ್ರೆಯ ಸೇವೆಗಳನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಸಮರ್ಥನಂ ಅಂಗವಿಕಲರ ಸಂಸ್ಥೆಯ ಮೈಸೂರು ವಿಭಾಗದ ಮುಖ್ಯಸ್ಥ ಶಿವರಾಜು, ಸಂಸ್ಥೆಯಲ್ಲಿ ಯುವತಿಯರಿಗೆ ಉಚಿತ ಕಂಪ್ಯೂಟರ್ ಶಿಕ್ಷಣ, ಇಂಗ್ಲಿಷ್ ಭಾಷಾ ತರಬೇತಿ, ವ್ಯಕ್ತಿತ್ವ ವಿಕಸನ, ಜೀವನ ಕೌಶಲ ತರಬೇತಿ ನೀಡಲಾಗುತ್ತಿದೆ. ಕಲಿಕೆಗೆ ಪೂರಕವಾದ ಪರಿಕರಗಳನ್ನು ಸಂಪೂರ್ಣ ಉಚಿತವಾಗಿ ಒದಗಿಸಲಾಗುತ್ತಿದೆ. ಈ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಬಳಸಿಕೊಂಡು ಬದುಕನ್ನು ಉತ್ತಮ ದಿಕ್ಕಿನಲ್ಲಿ ರೂಪಿಸಿಕೊಳ್ಳಬೇಕು ಎಂದು ಹೇಳಿದರು.ಸಂಸ್ಥೆಯ ಉದ್ಯೋಗಾಧಿಕಾರಿ ಆರ್. ಸುಬ್ರಮಣಿ, ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗಾವಕಾಶಗಳು ಸಾಕಷ್ಟಿವೆ. ವಿದ್ಯಾರ್ಥಿಗಳು ಕೌಶಲ ವೃದ್ಧಿಸಿಕೊಂಡು ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.ವಿಜ್ಞಾನ ಸಂಯೋಜಕ ಮಹಾಂತೇಶ್, ತರಬೇತುದಾರರಾದ ಸ್ಪರ್ಶ, ಎಸ್. ಲತಾ, ಪವನ್, ಲಕ್ಷ್ಮಿ ಹೇಮಲತಾ ಹಾಗೂ ರಂಗಕರ್ಮಿ ಶಶಿಕಾಂತ ಪಟೇಲ್ ಉಪಸ್ಥಿತರಿದ್ದರು.