ಕಾರವಾರ | ಕೈಕೊಟ್ಟ ಲವ್ವರ್ – ಮನನೊಂದು ಯುವಕ ಆತ್ಮಹತ್ಯೆ
ಕಾರವಾರ: ಪ್ರೀತಿಸಿದ ಹುಡುಗಿ ಕೈಕೊಟ್ಟ ಹಿನ್ನೆಲೆಯಲ್ಲಿ ಮನಸ್ಸಿನ ನೋವು ತಾಳಲಾರದೇ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡ ಭಾಗದ ರಾಮನಗರದ ಬಳಿ ನಡೆದಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಹರೀಶ ಮೇಸ್ತಾ (24) ಆತ್ಮಹತ್ಯೆಗೆ ಶರಣಾದ ಯುವಕ. ಇದನ್ನೂ ಓದಿ: ಸಿಜೆಪಿ ಪ್ರತಿಭಟನಾಕಾರರಿಗೆ ರಿಲೀಫ್, ಕ್ರಿಮ

ಕಾರವಾರ: ಪ್ರೀತಿಸಿದ ಹುಡುಗಿ ಕೈಕೊಟ್ಟ ಹಿನ್ನೆಲೆಯಲ್ಲಿ ಮನಸ್ಸಿನ ನೋವು ತಾಳಲಾರದೇ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡ ಭಾಗದ ರಾಮನಗರದ ಬಳಿ ನಡೆದಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಹರೀಶ ಮೇಸ್ತಾ (24) ಆತ್ಮಹತ್ಯೆಗೆ ಶರಣಾದ ಯುವಕ. ಇದನ್ನೂ ಓದಿ: ಸಿಜೆಪಿ ಪ್ರತಿಭಟನಾಕಾರರಿಗೆ ರಿಲೀಫ್, ಕ್ರಿಮಿನಲ್ಗಳ ವಿರುದ್ಧ ತನಿಖೆ: ದೆಹಲಿ ಸರ್ಕಾರ ತಾನು ಗಾಢವಾಗಿ ಪ್ರೀತಿಸುತ್ತಿದ್ದ ಯುವತಿಯನ್ನೇ ಮದುವೆಯಾಗಬೇಕೆಂಬ ಕನಸು ಕಂಡಿದ್ದ ಹರೀಶನಿಗೆ, ಇತ್ತೀಚೆಗೆ ಆಕೆ ದೂರವಾಗಿದ್ದು ತೀವ್ರ ನೋವು ತಂದೊಡ್ಡಿತ್ತು. ಪ್ರೇಮ ವೈಫಲ್ಯದಿಂದ ತೀವ್ರ ಮನನೊಂದಿದ್ದ ಈತ, ಮನೆಯಲ್ಲೇ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ವಿಷಯ ತಿಳಿದ ಹೊನ್ನಾವರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವಿನ ನಿಖರ ಕಾರಣ ಹಾಗೂ ಘಟನೆಯ ಹಿನ್ನೆಲೆಯ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಬಕೆಟ್ನಲ್ಲಿ ಬಿದ್ದು 8 ತಿಂಗಳ ಕಂದಮ್ಮ ದುರ್ಮರಣ