‘ಕಾವೇರಿ’ ಮುಂದಿನ ನಡೆ ಚರ್ಚೆಗೆ ಭಾನುವಾರ ಸರ್ವಪಕ್ಷ ಸಭೆ: ಡಿ.ಕೆ. ಶಿವಕುಮಾರ್
ನವದೆಹಲಿ: ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮುಂದಿನ ನಡೆ ಕುರಿತು ಚರ್ಚಿಸಲು ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ 'ಕೃಷ್ಣಾ'ದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು ಹಾಗೂ ಶಾಸಕರಿಗೆ ಸಭೆಗೆ ಆಹ್ವಾನ ನೀಡಲಾಗಿದೆ ಎಂದರು.ದೆಹಲಿಯ ಕರ್ನಾ
ನವದೆಹಲಿ: ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮುಂದಿನ ನಡೆ ಕುರಿತು ಚರ್ಚಿಸಲು ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ 'ಕೃಷ್ಣಾ'ದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು ಹಾಗೂ ಶಾಸಕರಿಗೆ ಸಭೆಗೆ ಆಹ್ವಾನ ನೀಡಲಾಗಿದೆ ಎಂದರು.ದೆಹಲಿಯ ಕರ್ನಾಟಕ ಭವನದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಿದ್ದೇವೆ. ಮುಂದೆ ಈ ವಿಚಾರವನ್ನು ಹೇಗೆ ತೆಗೆದುಕೊಂಡು ಹೋಗಬೇಕು ಎಂಬುದರ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಚರ್ಚೆ ಮಾಡಲಾಗುವುದು’ ಎಂದು ಹೇಳಿದರು.ಕೇಂದ್ರ ಸಚಿವರ ಜತೆ ಚರ್ಚೆಕಾವೇರಿ ವಿಚಾರವಾಗಿ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದ ಶಿವಕುಮಾರ್, ‘ಈ ವಿಚಾರವಾಗಿ ಸಂಸದರು, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ವಿ. ಸೋಮಣ್ಣ, ಜಗದೀಶ ಶೆಟ್ಟರ್ ಹಾಗೂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ರಾಜ್ಯದ ಹಿತಕ್ಕಾಗಿ ಅವರು ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ’ ಎಂದರು.ಸಂಪುಟ ವಿಸ್ತರಣೆ ಟೀಕೆಗೆ ತಿರುಗೇಟುಸಚಿವ ಸಂಪುಟ ವಿಸ್ತರಣೆ ವಿಳಂಬ ಕುರಿತು ಬಿಜೆಪಿ ನಾಯಕರು ಮಾಡಿರುವ ಟೀಕೆಗೆ ತಿರುಗೇಟು ನೀಡಿದ ಶಿವಕುಮಾರ್, ‘ಯಡಿಯೂರಪ್ಪನವರು ಕೂಡ ಸಚಿವ ಸಂಪುಟ ರಚನೆ ಮಾಡದೇ ಅಧಿಕಾರ ನಡೆಸಿರಲಿಲ್ಲವೇ? ಆಗ ಅಪ್ಪ-ಮಗ ಅಧಿಕಾರವನ್ನು ಅನುಭವಿಸಲಿಲ್ಲವೇ?’ ಎಂದು ಮರುಪ್ರಶ್ನಿಸಿದರು.