ಚಿತ್ತಾಪುರದಲ್ಲಿ ಮಾನವ ಕಳ್ಳಸಾಗಣೆ ವಿರೋಧಿ ದಿನದ ಕಾನೂನು ಅರಿವು ಕಾರ್ಯಕ್ರಮ
ಚಿತ್ತಾಪುರ: ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಜು.30 ರಂದು ಬೆಳಗ್ಗೆ 10 ಗಂಟೆಗೆ ಚಿತ್ತಾಪುರ ಪೊಲೀಸ್ ಠಾಣೆಯ ಆವರಣದಲ್ಲಿ 'ಮಾನವ ಕಳ್ಳಸಾಗಣೆ ವಿರೋಧಿ ದಿನ' ಕಾನೂನು ಅರಿವು ಹಮ್ಮಿಕೊಳ್ಳಲಾಗಿದೆ.ವಕೀಲ ಮಲ್ಲಿಕಾರ್ಜುನ ಹೊನಗುಂಟಿಕರ್ ಅವರು ಉಪನ್ಯಾಸ ನೀಡುವರು.ನಾಲ್ಕನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಸಿರಾಜುದ್ದ
ಚಿತ್ತಾಪುರ: ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಜು.30 ರಂದು ಬೆಳಗ್ಗೆ 10 ಗಂಟೆಗೆ ಚಿತ್ತಾಪುರ ಪೊಲೀಸ್ ಠಾಣೆಯ ಆವರಣದಲ್ಲಿ 'ಮಾನವ ಕಳ್ಳಸಾಗಣೆ ವಿರೋಧಿ ದಿನ' ಕಾನೂನು ಅರಿವು ಹಮ್ಮಿಕೊಳ್ಳಲಾಗಿದೆ.ವಕೀಲ ಮಲ್ಲಿಕಾರ್ಜುನ ಹೊನಗುಂಟಿಕರ್ ಅವರು ಉಪನ್ಯಾಸ ನೀಡುವರು.ನಾಲ್ಕನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಸಿರಾಜುದ್ದಿನ.ಎ ಅವರು ಕಾರ್ಯಕ್ರಮ ಉದ್ಘಾಟಿಸುವರು. ಸಿಪಿಐ ಎಸ್.ಸಿ. ಪಾಟೀಲ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಕಿಶನ್ ಮಾಡಲಗಿ, ಸಿವಿಲ್ ನ್ಯಾಯಾಧೀಶ ಹಾಗೂ ಸಮಿತಿಯ ಸದಸ್ಯ ಕಾರ್ಯದರ್ಶಿ ಅಭಿಷೇಕ್ ಜೋಶಿ, ಉಪಸ್ಥಿತರಿರುವರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260730-31-1911253734
Read the complete story at Prajavani