ಆ.2ಕ್ಕೆ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ
ಬೆಂಗಳೂರು: ಪೊಲೀಸ್ ಇಲಾಖೆಯ 3,991 ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ಲಿಖಿತ ಪರೀಕ್ಷೆ ಆಗಸ್ಟ್ 2 ರಂದು ನಡೆಯಲಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಈ ಕುರಿತು ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನೇಮಕಾತಿಯಲ್ಲಿ ಉಳಿಕೆ ಮೂಲವೃಂದದ 3,395 ಹಾಗೂ ಕಲ್ಯಾಣ ಕರ್ನಾಟಕ ವೃಂದದ 596 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು

ಬೆಂಗಳೂರು: ಪೊಲೀಸ್ ಇಲಾಖೆಯ 3,991 ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ಲಿಖಿತ ಪರೀಕ್ಷೆ ಆಗಸ್ಟ್ 2 ರಂದು ನಡೆಯಲಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಈ ಕುರಿತು ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನೇಮಕಾತಿಯಲ್ಲಿ ಉಳಿಕೆ ಮೂಲವೃಂದದ 3,395 ಹಾಗೂ ಕಲ್ಯಾಣ ಕರ್ನಾಟಕ ವೃಂದದ 596 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆಯನ್ನು ನಡೆಸುತ್ತಿದ್ದು, ಉಳಿಕೆ ಮೂಲ ವೃಂದದ ಅಭ್ಯರ್ಥಿಗಳಿಗೆ ಬೆಳಿಗ್ಗೆ 10 ರಿಂದ 11.30 ರವರೆಗೆ ರಾಜ್ಯದಾದ್ಯಂತ 884 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆಯ ಸಮಯವನ್ನು ಮಧ್ಯಾಹ್ನ 2.30 ರ ಬದಲು ಸಂಜೆ 4 ರಿಂದ 5.30 ರವರೆಗೆ ನಿಗದಿಪಡಿಸಲಾಗಿದೆ. ಇದಕ್ಕಾಗಿ 186 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಹೇಳಿದ್ದಾರೆ.‘ಪ್ರಾಮಾಣಿಕವಾಗಿ ಸಿದ್ಧತೆ ನಡೆಸಿರುವ ಪ್ರತಿಯೊಬ್ಬ ಅಭ್ಯರ್ಥಿಗೂ ನ್ಯಾಯ ಒದಗಿಸುವುದು ಸರ್ಕಾರದ ಬದ್ಧತೆ. ಪರೀಕ್ಷೆ ಬರೆಯುತ್ತಿರುವ ಎಲ್ಲ ಅಭ್ಯರ್ಥಿಗಳಿಗೂ ಶುಭಾಶಯಗಳು’ ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.