ಮುಂದಿನ ಮೂರು ದಿನ ರಾಜ್ಯದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
-ಬೆಂಗ್ಳೂರು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆ ಬೆಂಗಳೂರು: ಮುಂದಿನ ಮೂರು ದಿನ ರಾಜ್ಯದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange ALert) ಘೋಷಿಸಿ ಹವಾಮಾನ ಇಲಾಖೆ (Weather Report) ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು

-ಬೆಂಗ್ಳೂರು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆ ಬೆಂಗಳೂರು: ಮುಂದಿನ ಮೂರು ದಿನ ರಾಜ್ಯದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange ALert) ಘೋಷಿಸಿ ಹವಾಮಾನ ಇಲಾಖೆ (Weather Report) ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಇದನ್ನೂ ಓದಿ: Karnataka Cauvery Protest Live Updates | ಕಾವೇರಿ ಕಿಚ್ಚು – KRS ಡ್ಯಾಮ್ ಬಳಿ ತೀವ್ರಗೊಂಡ ಪ್ರತಿಭಟನೆ ಇನ್ನೂ ಕೊಡಗು, ಹಾಸನ, ಧಾರವಾಡ, ಗದಗ, ವಿಜಯಪುರಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣವಿರಲಿದ್ದು, ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗಲಿದೆ. ಕರಾವಳಿಯಲ್ಲಿ ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ.
Read the complete story at Public TV Kannada