ಕ್ರೀಡೆಯಲ್ಲಿ ಪರಿಶ್ರಮದಿಂದ ಸಾಧನೆ ಸಾಧ್ಯ: ಮರಿಸ್ವಾಮಿ
ಚನ್ನಪಟ್ಟಣ: ಕಠಿಣ ಪರಿಶ್ರಮ, ಶ್ರದ್ಧೆ ಇದ್ದರೆ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಬಹುದು ಎಂದು ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಬೆಂಗಳೂರು ದಕ್ಷಿಣ ಜಿಲ್ಲಾ ಉಪ ನಿರ್ದೇಶಕ ಮರಿಸ್ವಾಮಿ ಅಭಿಪ್ರಾಯಪಟ್ಟರು.ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ನಡೆದ ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀ

ಚನ್ನಪಟ್ಟಣ: ಕಠಿಣ ಪರಿಶ್ರಮ, ಶ್ರದ್ಧೆ ಇದ್ದರೆ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಬಹುದು ಎಂದು ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಬೆಂಗಳೂರು ದಕ್ಷಿಣ ಜಿಲ್ಲಾ ಉಪ ನಿರ್ದೇಶಕ ಮರಿಸ್ವಾಮಿ ಅಭಿಪ್ರಾಯಪಟ್ಟರು.ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ನಡೆದ ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೋತ್ತಿಪುರ ಜಿ.ಶಿವಣ್ಣ, ‘ಕ್ರೀಡೆ ಬದುಕಿನ ಅವಿಭಾಜ್ಯ ಅಂಗ. ದೈಹಿಕ ಕಸರತ್ತುಗಳನ್ನು ಪ್ರತಿನಿತ್ಯ ಮಾಡಿ ದೇಹವನ್ನು ಸದೃಢವಾಗಿ ಇಟ್ಟುಕೊಳ್ಳಬೇಕು’ ಎಂದರು.ನಗರಸಭೆ ಅಧ್ಯಕ್ಷ ನಾಗೇಶ್ ಧ್ವಜಾರೋಹಣ ನೆರವೇರಿಸಿದರು. ನಗರಸಭೆ ಸದಸ್ಯ ಸತೀಶ್ ಬಾಬು, ಪ್ರಾಂಶುಪಾಲರ ಸಂಘದ ಪದಾಧಿಕಾರಿಗಳಾದ ದೊಡ್ಡಬೋರಯ್ಯ, ಪ್ರದೀಪ್, ವಿವಿಧ ಕಾಲೇಜುಗಳ ಪ್ರಾಂಶುಪಾಲರಾದ ರಾಮಯ್ಯ, ಉಮಾದೇವಿ, ಇಂದ್ರಕುಮಾರ್, ಮಹೇಶ್, ಶ್ರೀನಿವಾಸ್, ದಿನೇಶ್, ಮಧುಕುಮಾರ್, ಸುರೇಶ್ ಭಾಗವಹಿಸಿದ್ದರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260731-14-1715923216