ಕೊಡಗು ಜಿಲ್ಲೆಯಾದ್ಯಂತ ಮಳೆ ಅರ್ಭಟ; ಹಾರಂಗಿ ಜಲಾಶಯದಿಂದ 13,000 ಕ್ಯೂಸೆಕ್ ನೀರು ರಿಲೀಸ್
ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಇದೇ ವೇಳೆ ಹಾರಂಗಿ ಜಲಾನಯನ (Harangi Reservoir) ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಹಾರಂಗಿ ಜಲಾಶಯಕ್ಕೆ ಒಳಹ

ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಇದೇ ವೇಳೆ ಹಾರಂಗಿ ಜಲಾನಯನ (Harangi Reservoir) ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಕಾವೇರಿ ನದಿಗೆ 13 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಒಂದು ಕಡೆ ಕಾವೇರಿ ನೀರಿಗಾಗಿ ಹೋರಾಟಗಳು ನಡೆಯುತ್ತಿರುವಾಗ, ಮತ್ತೊಂದೆಡೆ ಮಳೆಯ ಕೃಪೆಯಿಂದ ಕಾವೇರಿ ಮತ್ತೆ ತುಂಬಿ ಹರಿಯುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ನಾಲ್ಕು ಐದು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದೆ. ಅದರಲ್ಲೂ ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕಿನ ಹಾರಂಗಿ ಜಲಾನಯನ ಪ್ರದೇಶದಲ್ಲಿ ರಾತ್ರಿ ಪೂರ್ತಿ ಸುರಿದ ಭಾರೀ ಮಳೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಜಲಪಾತಕ್ಕೆ ಈಗಾಗಲೇ 11,000 ಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿರುವುದರಿಂದ ಜಲಾಶಯದ ನೀರಿನ ಮಟ್ಟ ಸುರಕ್ಷತಾ ಮಿತಿಯತ್ತ ತಲುಪಿದ ಹಿನ್ನೆಲೆಯಲ್ಲಿ, ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕಾವೇರಿ ನದಿಗೆ 13 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರನ್ನು ಹರಿಬಿಡುತ್ತಿದ್ದಾರೆ. ಹಾರಂಗಿಯಿಂದ ಬಿಡುಗಡೆಯಾಗುತ್ತಿರುವ ನೀರು ಕಾವೇರಿ ಮೂಲಕ ಕೃಷ್ಣರಾಜ ಸಾಗರ ಜಲಾಶಯದತ್ತ ಹರಿಯಲಿದ್ದು, ಮಾರ್ಗಮಧ್ಯದ ನದಿ ಪಾತ್ರದಲ್ಲಿರುವ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರಬೇಕೆಂದು ನೀರಾವರಿ ಇಲಾಖೆ ಸೂಚನೆ ನೀಡಿದೆ. ನದಿ ತೀರಕ್ಕೆ ಅನಗತ್ಯವಾಗಿ ತೆರಳದಂತೆ ಹಾಗೂ ಜಾನುವಾರುಗಳನ್ನು ನದಿಯ ಬಳಿ ಮೇಯಿಸದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ, ಇಂದು ರಾತ್ರಿಯಿಂದಲೇ ಸಾವಿರಾರು ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವುದರಿಂದ KRS ಅಣೆಕಟ್ಟಿಗೆ ಆರ್ಧ ಟಿಎಂಸಿ ನೀರು ಸೇರುವ ನೀರಿಕ್ಷೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ತುಂಗೆಯ ಅಬ್ಬರಕ್ಕೆ ಶೃಂಗೇರಿ ಪಟ್ಟಣದ ಹಲವು ಪ್ರದೇಶ ಜಲಾವೃತ – ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಮತ್ತೆ ಗುಡ್ಡ ಕುಸಿತ ಮತ್ತೊಂದೆಡೆ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ಇಂದು ರಜೆ ಘೋಷಿಸಿದೆ. ಹಲವೆಡೆ ರಸ್ತೆಗಳಲ್ಲಿ ನೀರು ಹರಿಯುತ್ತಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿರುವುದರಿಂದ ಸಾರ್ವಜನಿಕರು ಅನಗತ್ಯ ಸಂಚಾರವನ್ನು ತಪ್ಪಿಸುವಂತೆ ಮನವಿ ಮಾಡಲಾಗಿದೆ.