ರಾಜಕೀಯ ಬಿಡಿ, ಪ್ರಧಾನಿಗೆ ಮನವರಿಕೆ ಮಾಡಿ: ಬಿಜೆಪಿಗೆ ಪಿ.ರವಿಕುಮಾರ್ ತಿರುಗೇಟು
ಮಂಡ್ಯ: ‘ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕೆ ಪ್ರತಿಭಟನೆ ಮಾಡುವುದನ್ನು ಬಿಟ್ಟು, ಕಾವೇರಿ ಜಲಾನಯನ ಪ್ರದೇಶದಲ್ಲಿ ಎದುರಾಗಿರುವ ನೀರಿನ ಸಮಸ್ಯೆ ಬಗ್ಗೆ ಮೈಸೂರಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವರಿಕೆ ಮಾಡಿಕೊಡಲಿ’ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಕಾವೇರಿ ಜಲಾನಯನ ಪ್ರದೇಶದಲ್ಲಿ

ಮಂಡ್ಯ: ‘ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕೆ ಪ್ರತಿಭಟನೆ ಮಾಡುವುದನ್ನು ಬಿಟ್ಟು, ಕಾವೇರಿ ಜಲಾನಯನ ಪ್ರದೇಶದಲ್ಲಿ ಎದುರಾಗಿರುವ ನೀರಿನ ಸಮಸ್ಯೆ ಬಗ್ಗೆ ಮೈಸೂರಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವರಿಕೆ ಮಾಡಿಕೊಡಲಿ’ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕ್ಷೀಣಿಸಿರುವುದರಿಂದ ಜಲಾಶಯಗಳಲ್ಲಿ ಕುಡಿಯುವ ನೀರು ಹೊರತುಪಡಿಸಿ ಹೆಚ್ಚುವರಿ ನೀರಿಲ್ಲ. ಪ್ರಾಧಿಕಾರದ ಆದೇಶಕ್ಕೆ ಮಣಿದು ನೀರು ಬಿಡದಿರಲು ರಾಜ್ಯಸರ್ಕಾರ ಗಟ್ಟಿ ನಿರ್ಧಾರ ಮಾಡಿದೆ. ಇಂತಹ ಸಂದರ್ಭದಲ್ಲಿ ರಾಜಕೀಯ ಲಾಭ ಪಡೆಯಲು ಬಿಜೆಪಿಯವರು ಪ್ರತಿಭಟನೆ ಮಾಡುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕಿರುಕುಳ ಕೊಡುವುದನ್ನು ನಿಲ್ಲಿಸಿ ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕವೂ ಒಂದು ರಾಜ್ಯ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅವರಂತೆ ಒಬ್ಬ ಮುಖ್ಯಮಂತ್ರಿ ಎಂಬುದನ್ನು ಪರಿಗಣಿಸಲಿ. ಅದನ್ನು ಬಿಟ್ಟು ಬಿಜೆಪಿಯವರು ನಾಟಕವಾಡುವುದನ್ನು ಬಿಡಲಿ ಎಂದು ತಾಕೀತು ಮಾಡಿದರು.ಆ.2ರಂದು ನಡೆಯಲಿರುವ ಸರ್ವ ಪಕ್ಷಗಳ ಸಭೆಯಲ್ಲಿ ರಾಜ್ಯದ ನಿಲುವು ಹೇಗಿರಬೇಕೆಂಬುದನ್ನು ಸಲಹೆ ನೀಡಲಿ. ನೆಲ-ಜಲ ಹಾಗೂ ಭಾಷೆಯ ವಿಚಾರದಲ್ಲಿ ಆಳುವ ಪಕ್ಷದ ಜತೆ ಪ್ರತಿಪಕ್ಷ ನಿಲ್ಲುವಂತಾಗಬೇಕು. ಕನ್ನಡ ಪರ ಹಾಗೂ ರೈತ ಹೋರಾಟಗಾರರು ಸಾಂಕೇತಿಕವಾಗಿ ರಾಜ್ಯದ ಜನರಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಲಿ. ರಸ್ತೆ ಬಂದ್ ಮಾಡಬೇಡಿ, ಟೈಯರ್ ಸುಡಬೇಡಿ. ನಾವು ನೀರು ಬಿಟ್ಟಿಲ್ಲ, ಬಿಡುವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು.ತಮಿಳುನಾಡು ಸಿಎಂ ಜತೆ ವೈಮಾನಿಕ ಸಮೀಕ್ಷೆ‘ಮೇಕೆದಾಟು ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದ್ದು, ನವೀಕೃತ ಡಿಪಿಆರ್ ಸಲ್ಲಿಕೆ ಸಂಬಂಧ ಉನ್ನತ ಅಧಿಕಾರಿಗಳ ಸಭೆ ಕರೆದು ಸಧ್ಯದಲ್ಲೇ ಹೊಸ ಡಿಪಿಆರ್ ಸಲ್ಲಿಕೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯೋನ್ಮುಖರಾಗುತ್ತಾರೆ’ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಜೋಸೆಫ್ ಅವರನ್ನು ಗೌರವಪೂರ್ವಕವಾಗಿ ಸ್ವಾಗತಿಸಲಾಗುವುದು. ಕಾವೇರಿ ಸಂಕಷ್ಟವನ್ನು ಮನವರಿಕೆ ಮಾಡಿಕೊಡಲು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಅದೇ ರೀತಿ ಬಿಜೆಪಿಯವರು ರಾಜ್ಯದ ಹಿತವನ್ನು ಬಲಿಕೊಡದೆ ಪ್ರಧಾನಿ ಅವರಿಗೂ ಜಲ ಸಂಕಷ್ಟವನ್ನು ಅರ್ಥೈಸಲಿ ಎಂದರು.ಲೋಕಸಭೆ ಅಧಿವೇಶನದಲ್ಲಿ ನೀಟ್ ಹಾಗೂ ಮಹಿಳಾ ಬಿಲ್ ಮಂಡನೆಯಾಗಿದ್ದು, ಅದರಲ್ಲಿ ನಮ್ಮ ವರಿಷ್ಠರು ಭಾಗಿಯಾಗಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ವಿಳಂಬವಾಗಿದೆ. ಆ.13ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ಮುಂದಿನ ವಾರವೇ ಸಂಪುಟ ವಿಸ್ತರಣೆ ಆಗುವುದು ಖಚಿತ. ಇದರ ಬಗ್ಗೆ ಅನಗತ್ಯ ಟೀಕೆ ಸರಿಯಲ್ಲ ಎಂದು ಹೇಳಿದರು.