ಕಾವೇರಿ ಹೋರಾಟ| ಬಂಗಾರಪ್ಪ ರೀತಿ ಸಿಎಂ ದಿಟ್ಟತನ ಪ್ರದರ್ಶಿಸಲಿ: ಕುಮಾರ್ ಬಂಗಾರಪ್ಪ
ಮಂಡ್ಯ: ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾವೇರಿ ವಿಚಾರದಲ್ಲಿ ಸುಗ್ರೀವಾಜ್ಞೆ ತಂದು ರೈತರ ಪರವಾಗಿ ನಿಂತರು. ಅವರ ಶಿಷ್ಯ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಿಳುನಾಡಿಗೆ ಒಂದು ಹನಿ ನೀರು ಬಿಡುವುದಿಲ್ಲ ಎಂಬ ದಿಟ್ಟತನ ಪ್ರದರ್ಶಿಸಬೇಕು ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಆಗ್ರಹಿಸಿದರು.ಮಂಡ್ಯದಲ್ಲಿ ನಡೆಯುತ್ತಿರ

ಮಂಡ್ಯ: ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾವೇರಿ ವಿಚಾರದಲ್ಲಿ ಸುಗ್ರೀವಾಜ್ಞೆ ತಂದು ರೈತರ ಪರವಾಗಿ ನಿಂತರು. ಅವರ ಶಿಷ್ಯ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಿಳುನಾಡಿಗೆ ಒಂದು ಹನಿ ನೀರು ಬಿಡುವುದಿಲ್ಲ ಎಂಬ ದಿಟ್ಟತನ ಪ್ರದರ್ಶಿಸಬೇಕು ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಆಗ್ರಹಿಸಿದರು.ಮಂಡ್ಯದಲ್ಲಿ ನಡೆಯುತ್ತಿರುವ ಕಾವೇರಿ ಚಳವಳಿಯಲ್ಲಿ ಶುಕ್ರವಾರ ಭಾಗವಹಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು. ರಾಜಕಾರಣಿಗಳು ಹಾಗೂ ಜನಪ್ರತಿನಿಧಿಗಳು ರೈತರ ಸಮಸ್ಯೆ ಅರ್ಥ ಮಾಡಿಕೊಳ್ಳಬೇಕು. ಮೊದಲ ಕುಡಿಯುವ ನೀರಿಗೆ ನಂತರ ಕೃಷಿಗೆ ಆದ್ಯತೆ ನೀಡಬೇಕು ಎಂದರು.‘ಇಡೀ ಚಿತ್ರರಂಗವೇ ಕಾವೇರಿ ಚಳವಳಿ ಪರವಾಗಿದೆ. ನಾನು ಸಹ ಬಂಗಾರಪ್ಪ ಮಗನಾಗಿ ನಿಂತಿಲ್ಲ. ರೈತರ ಹಿತದೃಷ್ಟಿಯಿಂದ ಹೋರಾಟದ ಭಾಗವಾಗಿ ಬಂದಿದ್ದೇನೆ. ಭಾನುವಾರ ನಡೆಯುವ ಸರ್ವ ಸದಸ್ಯರ ಸಭೆಯಲ್ಲಿ ಯಾರೂ ರಾಜಕಾರಣ ಮಾಡುವುದಿಲ್ಲ ಅಂದು ತೆಗೆದುಕೊಳ್ಳುವ ನಿರ್ಣಯಕ್ಕೆ ನಮ್ಮ ಬೆಂಬಲವಿದೆ. ನೀರನ್ನು ತಮಿಳುನಾಡಿಗೆ ಹರಿಸಿದರೆ ಹೋರಾಟದ ಮುಂದುವರಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.
Read the complete story at Prajavani