ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಒತ್ತಡ ಇಲ್ಲ: ಹೊರಟ್ಟಿ
ಹುಬ್ಬಳ್ಳಿ: ‘ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನನ್ನ ಮೇಲೆ ಯಾರೂ ಒತ್ತಡ ಹಾಕಿಲ್ಲ. ಇದು ಗಾಳಿ ಸುದ್ದಿ’ ಎಂದು ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದರು.‘ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಆಸ್ಪತ್ರೆಯಲ್ಲಿದ್ದೆ. ಸುದ್ದಿ ತಿಳಿದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಆದರೆ, ಅವರು ರಾಜೀನಾಮೆ

ಹುಬ್ಬಳ್ಳಿ: ‘ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನನ್ನ ಮೇಲೆ ಯಾರೂ ಒತ್ತಡ ಹಾಕಿಲ್ಲ. ಇದು ಗಾಳಿ ಸುದ್ದಿ’ ಎಂದು ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದರು.‘ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಆಸ್ಪತ್ರೆಯಲ್ಲಿದ್ದೆ. ಸುದ್ದಿ ತಿಳಿದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಆದರೆ, ಅವರು ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿಲ್ಲ’ ಎಂದು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.‘ಕಾಂಗ್ರೆಸ್ನ ಇಬ್ಬರು ಸದಸ್ಯರು ಸಭಾಪತಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಅವರೇ ಗಾಳಿ ಸುದ್ದಿ ಹರಡು ತ್ತಿದ್ದಾರೆ. ಈ ಹಿಂದೆ ಸಭಾಪತಿ ಆಗಲು ಹೆಚ್ಚಿನ ನಾಯಕರು ಹಿಂದೇಟು ಹಾಕುತ್ತಿದ್ದರು. ಈಗ ಕೆಲವರಿಗೆ ಸಭಾಪತಿ ಸ್ಥಾನದ ಮೇಲೆ ಪ್ರೀತಿ ಬಂದಿದೆ’ ಎಂದರು.‘ನಾನು ಕುರ್ಚಿಗೆ ಅಂಟಿಕೊಂಡಿಲ್ಲ. ಸರ್ಕಾರ ಸೂಚಿಸಿದರೆ ತಕ್ಷಣ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಅವಿಶ್ವಾಸ ನಿರ್ಣಯ ಮಂಡನೆ ಮಾಡುವವರೆಗೂ ಕಾಯುವುದಿಲ್ಲ. ಮುಖ್ಯಮಂತ್ರಿ ಮೇಲೆ ಒತ್ತಡವಿದ್ದರೆ ನನ್ನನ್ನು ಬದಲಿಸಲಿ’ ಎಂದು ಹೇಳಿದರು.‘ಈ ಹಿಂದೆ ಸರ್ಕಾರ ಬದಲಾದಾಗಲೂ ವಿಧಾನ ಪರಿಷತ್ ಸಭಾಪತಿಯನ್ನು ಅವಧಿಗೂ ಮುನ್ನ ಕೆಳಗಿಳಿಸಿದ ಉದಾಹರಣೆ ಇಲ್ಲ. ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಸೂಕ್ತ ಕಾರಣ ಬೇಕು’ ಎಂದರು.