ಚಾಮರಾಜನಗರ ಥಿಯೇಟರ್ನಿಂದ ತ.ನಾಡು ಸಿಎಂ ವಿಜಯ್ ಸಿನಿಮಾ ಕಿಕ್ಔಟ್
– ಕಾವೇರಿ ನೀರಿಗಾಗಿ ರೈತರ ಪ್ರತಿಭಟನೆ ಚಾಮರಾಜನಗರ: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water) ಹರಿಸುವುದನ್ನು ವಿರೋಧಿಸಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ (Chamarajanagara) ಪ್ರತಿಭಟನೆ ತೀವ್ರಗೊಂಡಿದೆ. ಕಾವೇರಿ ವಿವಾದದ ಹಿನ್ನೆಲೆಯಲ್ಲಿ ನಗರದ ಬಸವೇಶ್ವರ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದ್ದ ತಮಿಳುನಾಡು ಸಿಎಂ, ನಟ ಜೋಸೆಫ್ ವಿಜಯ್ ಅ

– ಕಾವೇರಿ ನೀರಿಗಾಗಿ ರೈತರ ಪ್ರತಿಭಟನೆ ಚಾಮರಾಜನಗರ: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water) ಹರಿಸುವುದನ್ನು ವಿರೋಧಿಸಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ (Chamarajanagara) ಪ್ರತಿಭಟನೆ ತೀವ್ರಗೊಂಡಿದೆ. ಕಾವೇರಿ ವಿವಾದದ ಹಿನ್ನೆಲೆಯಲ್ಲಿ ನಗರದ ಬಸವೇಶ್ವರ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದ್ದ ತಮಿಳುನಾಡು ಸಿಎಂ, ನಟ ಜೋಸೆಫ್ ವಿಜಯ್ ಅಭಿನಯದ ‘ಜನನಾಯಗನ್’ (Jana Nayagan) ಸಿನಿಮಾವನ್ನು ಪ್ರದರ್ಶನದಿಂದ ರದ್ದುಗೊಳಿಸಲಾಗಿದೆ. ತಮಿಳುನಾಡು ಸರ್ಕಾರದ ಧೋರಣೆ ಖಂಡಿಸಿ ವಿವಿಧ ಕನ್ನಡ ಮತ್ತು ರೈತ ಸಂಘಟನೆಗಳು ಚಿತ್ರಮಂದಿರಕ್ಕೆ ಮುತ್ತಿಗೆ ಹಾಕುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಸ್ಥಳೀಯರ ಆಕ್ರೋಶಕ್ಕೆ ಮಣಿದ ಚಿತ್ರಮಂದಿರದ ಮಾಲೀಕರು ಪ್ರದರ್ಶನವನ್ನು ರದ್ದುಗೊಳಿಸಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿ ಕಾವೇರಿ ಹೋರಾಟದ ಬಿಸಿ ದಿನದಿಂದ ದಿನಕ್ಕೆ ಏರುತ್ತಿದೆ. ಸಿನಿಮಾ ಮತ್ತೆ ಪ್ರದರ್ಶನ ಮಾಡಿದರೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ʻಕಾವೇರಿ ಕಿಚ್ಚುʼ – ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಿಕೆಗೆ ಸಿಎಂ ಡಿಕೆಶಿ ಮನವಿ ಲೋಟದಿಂದ ತಟ್ಟೆ ಬಡಿದು ತಮಿಳುನಾಡು ಸರ್ಕಾರ ಹಾಗೂ ಸಿಡಬ್ಲೂಆರ್ಸಿ ಹಾಗೂ ಸಿಡಬ್ಲೂಎಂಎ ವಿರುದ್ಧ ಆಕ್ರೋಶ ಹೊರಹಾಕಿದರು. ಒಂದು ವೇಳೆ ತಮಿಳುನಾಡು ಸಿಎಂ ತಮ್ಮ ನಿಲುವು ಸ್ಪಷ್ಟಪಡಿಸದಿದ್ರೆ ಗಡಿ ಬಂದ್ ಮಾಡುವುದಾಗಿಯೂ ಎಚ್ಚರಿಕೆ ನೀಡಲಾಯಿತು.