ಐಒಸಿಎಲ್ಗೆ ₹2,661 ಕೋಟಿ ನಷ್ಟ
ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ತೈಲೋತ್ಪನ್ನ ಮಾರಾಟ ಕಂಪನಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ₹2,661 ಕೋಟಿ ನಷ್ಟ ದಾಖಲಿಸಿದೆ.ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹5,668 ಕೋಟಿ ಲಾಭ ಗಳಿಸಿತ್ತು. ಪಶ್ಚಿಮ ಏಷ್ಯಾ ಸಂಘರ್ಷದಿಂದ ಕಚ್ಚಾ ತೈಲ ದರ ಏರಿಕೆಯಾಯಿತು. ಆದರೂ, ಪೆಟ್ರೋಲ್,

ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ತೈಲೋತ್ಪನ್ನ ಮಾರಾಟ ಕಂಪನಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ₹2,661 ಕೋಟಿ ನಷ್ಟ ದಾಖಲಿಸಿದೆ.ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹5,668 ಕೋಟಿ ಲಾಭ ಗಳಿಸಿತ್ತು. ಪಶ್ಚಿಮ ಏಷ್ಯಾ ಸಂಘರ್ಷದಿಂದ ಕಚ್ಚಾ ತೈಲ ದರ ಏರಿಕೆಯಾಯಿತು. ಆದರೂ, ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ದರವನ್ನು ಏರಿಕೆ ಮಾಡದೇ ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಮಾರಾಟ ಮಾಡಲಾಯಿತು. ಇದರಿಂದ ಕಂಪನಿಗೆ ನಷ್ಟ ಉಂಟಾಗಿದೆ ಎಂದು ಕಂಪನಿ ತಿಳಿಸಿದೆ. ಕಂಪನಿಯ ವರಮಾನವು ಶೇ 26ರಷ್ಟು ಏರಿಕೆಯಾಗಿದ್ದು, ₹2.75 ಲಕ್ಷ ಕೋಟಿಯಾಗಿದೆ ಎಂದು ತಿಳಿಸಿದೆ. ಸರ್ಕಾರಿ ಸ್ವಾಮ್ಯದ ತೈಲೋತ್ಪನ್ನ ಮಾರಾಟ ಕಂಪನಿಗಳಾದ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ₹3,962 ಕೋಟಿ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್ಪಿಸಿಎಲ್) ಜೂನ್ ತ್ರೈಮಾಸಿಕದಲ್ಲಿ ₹11,526 ಕೋಟಿ ನಷ್ಟ ಕಂಡಿವೆ.
Read the complete story at Prajavani