ಪರಪ್ಪನ ಅಗ್ರಹಾರ ಜೈಲಿಗೆ ವಿಜಯಲಕ್ಷ್ಮಿ ಭೇಟಿ; ದರ್ಶನ್ ಜೊತೆ ಅರ್ಧ ಗಂಟೆ ಮಾತುಕತೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಶುಕ್ರವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಸಂಜೆ 4 ಗಂಟೆ ಸುಮಾರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಆಗಮಿಸಿದ ವಿಜಯಲಕ್ಷ್ಮಿ, ನಿಯಮಾನುಸಾರ ಜೈಲಿನೊಳಗೆ ತೆರಳಿ ಪತಿ ದರ್ಶನ್ ಅವರನ್ನು ಭೇಟಿ ಮಾಡಿದರು. ಭೇಟಿಯ ವೇಳೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಶುಕ್ರವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಸಂಜೆ 4 ಗಂಟೆ ಸುಮಾರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಆಗಮಿಸಿದ ವಿಜಯಲಕ್ಷ್ಮಿ, ನಿಯಮಾನುಸಾರ ಜೈಲಿನೊಳಗೆ ತೆರಳಿ ಪತಿ ದರ್ಶನ್ ಅವರನ್ನು ಭೇಟಿ ಮಾಡಿದರು. ಭೇಟಿಯ ವೇಳೆ ದರ್ಶನ್ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದು, ಅವರಿಗಾಗಿ ಹಣ್ಣು-ಹಂಪಲು ಕೂಡ ತಂದಿದ್ದರು. ಇದನ್ನೂ ಓದಿ: ದರ್ಶನ್ ಭೇಟಿ ಬಳಿಕ ವಿಜಯಲಕ್ಷ್ಮಿ ಹಾಕಿದ್ದ ಪೋಸ್ಟನ್ನೇ ಕಾಪಿ ಮಾಡಿದ ಧನ್ವೀರ್; ಅರ್ಥ ಏನ್ ಗೊತ್ತಾ? ಸುಮಾರು ಅರ್ಧ ಗಂಟೆ ಇಬ್ಬರೂ ಮಾತುಕತೆ ನಡೆಸಿದರು. ಬಳಿಕ ಸಂಜೆ 5:30ರ ಸುಮಾರಿಗೆ ವಿಜಯಲಕ್ಷ್ಮಿ ಜೈಲಿನಿಂದ ಹೊರಬಂದರು. ಇತ್ತೀಚೆಗಷ್ಟೇ ನಟ ಧನ್ವೀರ್ ಕೂಡ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ದರ್ಶನ್ ಅವರನ್ನು ಭೇಟಿಯಾಗಿದ್ದರು. ಅದರ ಬೆನ್ನಲ್ಲೇ ಇದೀಗ ಪತ್ನಿ ವಿಜಯಲಕ್ಷ್ಮಿ ಜೈಲಿಗೆ ಭೇಟಿ ನೀಡಿರುವುದು ಗಮನ ಸೆಳೆದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು, ಪ್ರಕರಣದ ತನಿಖೆ ಹಾಗೂ ನ್ಯಾಯಾಂಗ ಪ್ರಕ್ರಿಯೆ ಮುಂದುವರಿದಿದೆ.ಇದನ್ನೂ ಓದಿ: ಬ್ರಾಹ್ಮಿ ಮುಹೂರ್ತದಲ್ಲಿ ಬಿಡುಗಡೆಯಾಗಲಿದೆ ‘ರಾಮಾಯಣ’ ಟ್ರೈಲರ್