ವಿಜಯನಗರ ಕಾಲುವೆಗೆ ನೀರು ಹರಿಸಲು ಆಗ್ರಹ: ಬಿಜೆಪಿ ಬೃಹತ್ ಪಾದಯಾತ್ರೆ
ಕೊಪ್ಪಳ: ಜಿಲ್ಲೆಯ ಜೀವನಾಡಿ ತುಂಗಭದ್ರಾ ಜಲಾಶಯದಿಂದ ವಿಜಯನಗರ 11ಎ ವಿತರಣಾ ನಾಲುವೆಗೆ ನೀರು ಹರಿಸಲು ಆಗ್ರಹಿಸಿ ಬಿಜೆಪಿ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.ಬಿಜೆಪಿ ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ ನೂರಾರು ಸಂಖ್ಯೆಯಲ್ಲಿ ರೈತರು ಪಾಲ್ಗೊಂಡಿದ್ದು, ಮಾಜಿ ಸಚಿವ ಎಚ್.ಜಿ. ರಾಮುಲು, ಶಾಸಕರಾದ ಜನಾರ್ದನ ರೆಡ್ಡಿ, ಹೇಮಲತಾ ನಾಯಕ, ಎನ್. ರವಿ
ಕೊಪ್ಪಳ: ಜಿಲ್ಲೆಯ ಜೀವನಾಡಿ ತುಂಗಭದ್ರಾ ಜಲಾಶಯದಿಂದ ವಿಜಯನಗರ 11ಎ ವಿತರಣಾ ನಾಲುವೆಗೆ ನೀರು ಹರಿಸಲು ಆಗ್ರಹಿಸಿ ಬಿಜೆಪಿ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.ಬಿಜೆಪಿ ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ ನೂರಾರು ಸಂಖ್ಯೆಯಲ್ಲಿ ರೈತರು ಪಾಲ್ಗೊಂಡಿದ್ದು, ಮಾಜಿ ಸಚಿವ ಎಚ್.ಜಿ. ರಾಮುಲು, ಶಾಸಕರಾದ ಜನಾರ್ದನ ರೆಡ್ಡಿ, ಹೇಮಲತಾ ನಾಯಕ, ಎನ್. ರವಿಕುಮಾರ್, ಮಾಜಿ ಸಂಸದ ಶಿವರಾಮಗೌಡ, ಮಾಜಿ ಸಚಿವ ಹಾಲಪ್ಪ ಆಚಾರ್, ಮಾಜಿ ಶಾಸಕ ಪರಣ್ಣ ಮುನವಳ್ಳಿ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಭಾಗಿಯಾಗಿದ್ದರು.ಗಂಗಾವತಿ ತಾಲ್ಲೂಕಿನ ಅಂಜನಾದ್ರಿಯಲ್ಲಿ ಆಂಜನೇಯನ ಪಾದಗಟ್ಟೆಗೆ ಪೂಜೆ ಸಲ್ಲಿಸಿ ಪ್ರತಿಭಟನೆ ಆರಂಭಿಸಿದರು. ಹಿಟ್ನಾಳ ಕ್ರಾಸ್ ತನಕ ಬೈಕ್ ಮೇಲೆ ಬಂದು ಬಿಜೆಪಿ ಮುಖಂಡರು ಹಾಗೂ ರೈತರು ಅಲ್ಲಿಂದ ಮುನಿರಾಬಾದ್ ಕಾಡಾ ಕಚೇರಿ ತನಕ ಪಾದಯಾತ್ರೆ ತನಕ ಸಾಗಿದರು.ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 27 ಟಿಎಂಸಿ ಅಡಿ ನೀರು ಮಾತ್ರ ಜಲಾಶಯದಲ್ಲಿ ಇದ್ದಾಗಲೂ ವಿಜಯನಗರ ವಿತರಣಾ ಕಾಲುವೆಗೆ ನೀರು ಹರಿಸಲಾಗಿತ್ತು. ಈಗ 36 ಟಿಎಂಸಿ ಅಡಿ ನೀರು ಇದ್ದಾಗಲೂ ನೀರು ಹರಿಸಲು ಹಿಂದೇಟು ಯಾಕೆ? ಎಂದು ಹೋರಾಟ ನಿರತರು ಪ್ರಶ್ನಿಸಿದರು.ಹಿಟ್ನಾಳ ಕ್ರಾಸ್ನಿಂದ ಪಾದಯಾತ್ರೆ ಆರಂಭಿಸಿದ ಬಳಿಕ ಮಳೆ ಸುರಿಯುತ್ತಿದ್ದು ಮಳೆ ನಡುವೆಯೂ ಬಿಜೆಪಿ ಮುಖಂಡರು ಸಾಗಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಸೇರಿದಂತೆ ನೂರಾರು ಪೊಲೀಸರು ಭದ್ರತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.