ಮಲೆನಾಡಿನಲ್ಲಿ ಮಳೆ ಚುರುಕು: ತುಂಗಾ ಜಲಾಶಯದಿಂದ 55,197 ಕ್ಯುಸೆಕ್ ನೀರು ಹೊರಕ್ಕೆ
ಶಿವಮೊಗ್ಗ: ಮಲೆನಾಡಿನಲ್ಲಿ ಮಳೆ ಬಿರುಸುಗೊಂಡಿದೆ. ಹೀಗಾಗಿ ಗಾಜನೂರಿನ ತುಂಗಾ, ಲಕ್ಕವಳ್ಳಿಯ ಭದ್ರಾ ಹಾಗೂ ಕಾರ್ಗಲ್ನ ಲಿಂಗನಮಕ್ಕಿ ಜಲಾಶಯಗಳಿಗೆ ಒಳಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ.ಆಗುಂಬೆ, ಚಕ್ರಾ ದಾಖಲೆಯ ಮಳೆ: ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯಲ್ಲಿ ಕಳೆದ 24 ಗಂಟೆಗಳಲ್ಲಿ 28.6 ಸೆಂ.ಮೀ ದಾಖಲೆಯ ಮಳೆಯಾಗಿದೆ. ಇಲ್ಲಿನ ವಾರಾಹಿ ಜಲಾನಯನ ಪ್ರದೇಶದ ವ್ಯಾಪ್ತ

ಶಿವಮೊಗ್ಗ: ಮಲೆನಾಡಿನಲ್ಲಿ ಮಳೆ ಬಿರುಸುಗೊಂಡಿದೆ. ಹೀಗಾಗಿ ಗಾಜನೂರಿನ ತುಂಗಾ, ಲಕ್ಕವಳ್ಳಿಯ ಭದ್ರಾ ಹಾಗೂ ಕಾರ್ಗಲ್ನ ಲಿಂಗನಮಕ್ಕಿ ಜಲಾಶಯಗಳಿಗೆ ಒಳಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ.ಆಗುಂಬೆ, ಚಕ್ರಾ ದಾಖಲೆಯ ಮಳೆ: ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯಲ್ಲಿ ಕಳೆದ 24 ಗಂಟೆಗಳಲ್ಲಿ 28.6 ಸೆಂ.ಮೀ ದಾಖಲೆಯ ಮಳೆಯಾಗಿದೆ. ಇಲ್ಲಿನ ವಾರಾಹಿ ಜಲಾನಯನ ಪ್ರದೇಶದ ವ್ಯಾಪ್ತಿಯ ಹೊಸನಗರ ತಾಲ್ಲೂಕಿನ ಚಕ್ರಾ ನಗರದಲ್ಲಿ 21 ಸೆಂ.ಮೀ ಮಳೆ ದಾಖಲಾಗಿದೆ.ಸಾವೇಹಕ್ಲಿನಲ್ಲಿ 19.4, ಮಾಣಿಯಲ್ಲಿ 17.1 ಹಾಗೂ ಮಾಸ್ತಿಕಟ್ಟೆಯಲ್ಲಿ 16 ಸೆಂ.ಮೀ ಮಳೆಯಾಗಿದೆ.ತುಂಗಾ ಜಲಾಶಯದಿಂದ ನೀರು ಹೊರಕ್ಕೆ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಪ್ಪ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಭಾಗದ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಗಾಜನೂರಿನ ತುಂಗಾ ಜಲಾಶಯಕ್ಕೆ ಶನಿವಾರ ಬೆಳಿಗ್ಗೆ 55,197 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಜಲಾಶಯ ಈಗಾಗಲೇ ಭರ್ತಿ ಆಗಿರುವುದರಿಂದ ತುಂಗಾ ನದಿಗೆ 52,950 ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ನಾಲೆಗಳಿಗೆ 2 ಸಾವಿರ ಕ್ಯುಸೆಕ್ ನೀರು ಹರಿಸಲಾಗಿದೆ.ಭದ್ರಾ ಒಳಹರಿವು ಹೆಚ್ಚಳ: ಭದ್ರಾ ಜಲಾಶಯಕ್ಕೆ ಒಳಹರಿವು 12,983 ಕ್ಯುಸೆಕ್ ಇದೆ. ಕಳೆದ 24 ಗಂಟೆಗಳಲ್ಲಿ ಜಲಾಶಯದಲ್ಲಿ 1.3 ಅಡಿ ನೀರು ಏರಿಕೆಯಾಗಿದೆ. 186 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 157.3 ಅಡಿ ನೀರಿನ ಸಂಗ್ರಹ ಇದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 180.3 ಅಡಿ ನೀರು ಸಂಗ್ರಹಗೊಂಡಿತ್ತು.ಕಾರ್ಗಲ್ ನ ಲಿಂಗನಮಕ್ಕಿ ಜಲಾಶಯದ ಒಳಹರಿವಿನ ಪ್ರಮಾಣ 38,183 ಕ್ಯುಸೆಕ್ ಗೆ ಏರಿಕೆಯಾಗಿದೆ. 1819 ಅಡಿ ನೀರು ಸಂಗ್ರಹಣೆ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1777.95 ಅಡಿ ನೀರಿನ ಸಂಗ್ರಹ ಇದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ 1811.40 ಅಡಿ ನೀರು ಸಂಗ್ರಹಗೊಂಡಿತ್ತು.