ಪ್ರತಿಭಟನಾಕಾರರ ಪ್ರೇರಣೆಯಿಂದ ಮೋದಿಯನ್ನು ನಿಂದಿಸಿದ್ದೆ ಎಂದು ಕ್ಷಮೆ ಕೋರಿದ ಯುವತಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಯುವತಿ ರುಚಿಕಾ ಸಿಂಗ್, ಕ್ಷಮೆ ಯಾಚಿಸಿದ್ದಾರೆ.ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಾಕ್ರೋಚ್ ಜನತಾ ಪಕ್ಷವು (ಸಿಜೆಪಿ) ಜುಲೈ 23ರಂದು ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ರುಚಿಕಾ, ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಅದರಂತೆ, ನೋಯ್ಡಾದ ಎಕ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಯುವತಿ ರುಚಿಕಾ ಸಿಂಗ್, ಕ್ಷಮೆ ಯಾಚಿಸಿದ್ದಾರೆ.ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಾಕ್ರೋಚ್ ಜನತಾ ಪಕ್ಷವು (ಸಿಜೆಪಿ) ಜುಲೈ 23ರಂದು ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ರುಚಿಕಾ, ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಅದರಂತೆ, ನೋಯ್ಡಾದ ಎಕ್ಸ್ಪ್ರೆಸ್ವೇ ಪೊಲೀಸ್ ಠಾಣೆಯಲ್ಲಿ 'ಜಿರೋ ಎಫ್ಐಆರ್‘ ದಾಖಲಿಸಲಾಗಿತ್ತು. ಬಳಿಕ ಪ್ರಕರಣವನ್ನು, ದೆಹಲಿಯ ಸಂಸತ್ ಭವನ ರಸ್ತೆಯ ಠಾಣೆಗೆ ವರ್ಗಾಯಿಸಲಾಗಿದೆ.ತಮ್ಮ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಹೇಳಿಕೆ ನೀಡಿರುವ ಯುವತಿ, ಪ್ರತಿಭಟನಾಕಾರರಿಂದ ಪ್ರಭಾವಿತಳಾಗಿ ಹೇಳಿಕೆ ನೀಡಿದ್ದೆ ಎಂದಿದ್ದಾರೆ. ಕೆಲವರು ಮೋದಿ ಅವರನ್ನು ಅವಾಚ್ಯವಾಗಿ ನಿಂದಿಸುತ್ತಿದ್ದರು. ಅದರಿಂದ ಪ್ರೇರಿತಳಾಗಿ ನಾನೂ ಮಾತನಾಡಿಬಿಟ್ಟೆ ಎಂದು ಹೇಳಿಕೊಂಡಿದ್ದಾರೆ.ದಾರಿ ತಪ್ಪಿದ ಮಕ್ಕಳನ್ನು ಕೋರ್ಟ್ಗೆ ಎಳೆಯುವುದರಿಂದ ಸಮಸ್ಯೆ ಬಗೆಹರಿಯಲ್ಲ: ಮೋದಿಪ್ರತಿಭಟನೆ ವೇಳೆ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಯುವತಿ ವಿರುದ್ಧ FIR ದಾಖಲು‘ಸ್ನೇಹಿತರೊಂದಿಗೆ ಪ್ರತಿಭಟನಾ ಸ್ಥಳಕ್ಕೆ ಹೋಗಿದ್ದೆ. ಪ್ರಧಾನಿ ಮೋದಿಯವರನ್ನು ನಿಂದಿಸುತ್ತಿದ್ದ ಹಲವರು ಅಲ್ಲಿದ್ದರು. ನಾನು ಅವರ ಪ್ರಭಾವಕ್ಕೆ ಒಳಗಾಗಿ, ಅನುಚಿತ ಶಬ್ದಗಳನ್ನು ಬಳಸಿದ್ದೆ. ನನಗೀಗ ಕೇವಲ 15 ವರ್ಷ. ನಾನು ಮಾಡಿರುವುದು ಕ್ಷಮೆಗೆ ಅರ್ಹವಲ್ಲದ್ದು. ಆದರೂ, ಇದೇ ನನ್ನ ಮೊದಲ ಹಾಗೂ ಕೊನೇ ತಪ್ಪು. ಇನ್ನೆಂದೂ ಈ ರೀತಿ ಮಾಡುವುದಿಲ್ಲ. ಇಡೀ ದೇಶದ ಜನರಿಗೆ ಪ್ರಾಮಾಣಿಕವಾಗಿ ಕ್ಷಮೆ ಕೋರುತ್ತೇನೆ’ ಎಂದಿದ್ದಾರೆ.ಹಾಗೆಯೇ, ‘ತುಂಬಾ ನಾಚಿಕೆಯಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿರುವ ಯುವತಿ, ‘ಎಲ್ಲರಲ್ಲೂ ಕ್ಷಮೆ ಕೋರುತ್ತೇನೆ. ದಯವಿಟ್ಟು ನನ್ನನ್ನು ಕ್ಷಮಿಸಿ’ ಎಂದಿದ್ದಾರೆ.ಮತ್ತೊಂದು ವಿಡಿಯೊ ಹಂಚಿಕೊಂಡ ಮೋದಿಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾತ್ರಿ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಮತ್ತೊಂದು ವಿಡಿಯೊ ಹಂಚಿಕೊಂಡಿದ್ದಾರೆ.‘ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಇತ್ತೀಚಿಗೆ ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆ ವೇಳೆ ನನ್ನ ಹಾಗೂ ನನ್ನ ತಾಯಿಯ ಮೇಲೂ ಅವಹೇಳನಕಾರಿ ಪದ ಬಳಸಿ ನಿಂದಿಸಲಾಯಿತು. ಆದರೆ, ಅಂತಹ ದಾರಿ ತಪ್ಪಿದ ಮಕ್ಕಳನ್ನು ನ್ಯಾಯಾಲಯಕ್ಕೆ ಎಳೆಯುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ, ಹೀಗಾಗಿ ಅವರನ್ನು ನಾನು ಕ್ಷಮಿಸಲು ಬಯಸುತ್ತೇನೆ’ ಎಂದಿದ್ದಾರೆ. View this post on Instagram A post shared by Narendra Modi (@narendramodi)