ಚಿತ್ರದುರ್ಗದಲ್ಲಿ ತಂಬಾಕು ಮಾರಾಟಗಾರರಿಂದ ₹4,100 ದಂಡ ವಸೂಲಿ
ಚಿತ್ರದುರ್ಗ: ನಗರದ ಚಳ್ಳಕೆರೆ ಗೇಟ್ ಸುತ್ತಲಿನ ಪ್ರದೇಶದಲ್ಲಿ ಈಚೆಗೆ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ತನಿಖಾ ತಂಡ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿದೆ.ಕೋಟ್ಪಾ ಕಾಯ್ದೆ ಉಲ್ಲಂಘಿಸಿದ ಮಾಲೀಕರ ವಿರುದ್ಧ ವಿವಿಧ ಸೆಕ್ಷನ್ ಅಡಿ 36 ಪ್ರಕರಣ ದಾಖಲಿಸಿ ₹ 4,100 ದಂಡ ವಸೂಲಿ ಮಾಡಿದೆ. ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ, ಸಾಮಾಜ

ಚಿತ್ರದುರ್ಗ: ನಗರದ ಚಳ್ಳಕೆರೆ ಗೇಟ್ ಸುತ್ತಲಿನ ಪ್ರದೇಶದಲ್ಲಿ ಈಚೆಗೆ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ತನಿಖಾ ತಂಡ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿದೆ.ಕೋಟ್ಪಾ ಕಾಯ್ದೆ ಉಲ್ಲಂಘಿಸಿದ ಮಾಲೀಕರ ವಿರುದ್ಧ ವಿವಿಧ ಸೆಕ್ಷನ್ ಅಡಿ 36 ಪ್ರಕರಣ ದಾಖಲಿಸಿ ₹ 4,100 ದಂಡ ವಸೂಲಿ ಮಾಡಿದೆ. ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ, ಸಾಮಾಜಿಕ ಕಾರ್ಯಕರ್ತ ಕೆ.ಎಂ.ತಿಪ್ಪೇಸ್ವಾಮಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಸಿ.ವಿಶ್ವ, ರುಕ್ಮಿಣಿ, ಹಿನಾಕೌಸರ್ ಇದ್ದರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260801-44-1059795125
Read the complete story at Prajavani