ಬತ್ತಿ ಹೋದ ಕೆರೆಯಲ್ಲಿ ನಮಾಜ್ ಮಾಡಿ ಮಳೆಗಾಗಿ ಪ್ರಾರ್ಥಿಸಿದ ಮುಸ್ಲಿಂ ಬಾಂಧವರು
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮಳೆ ಇಲ್ಲದೇ ಜನ ಕಂಗಾಲಾಗಿದ್ದಾರೆ. ಮಳೆಗಾಗಿ (Rain) ರೈತರು ದೇವರು, ದೈವಗಳ ಮೊರೆ ಹೋಗಿದ್ದಾರೆ. ಅದೇ ರೀತಿ ಚೇಳೂರು (Chelur) ತಾಲೂಕಿನ ನಾರೇಮದ್ದೇಪಲ್ಲಿ ಗ್ರಾಮದಲ್ಲಿ ಬತ್ತಿ ಹೋದ ಕೆರೆಯಲ್ಲಿ ಮುಸ್ಲಿಂ ಬಾಂಧವರು ನಮಾಜ್ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದಾರೆ. ಬತ್ತಿ ಹೋಗಿರುವ ಕೆರೆ ಅಂಗಳದಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ನಮಾಜ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮಳೆ ಇಲ್ಲದೇ ಜನ ಕಂಗಾಲಾಗಿದ್ದಾರೆ. ಮಳೆಗಾಗಿ (Rain) ರೈತರು ದೇವರು, ದೈವಗಳ ಮೊರೆ ಹೋಗಿದ್ದಾರೆ. ಅದೇ ರೀತಿ ಚೇಳೂರು (Chelur) ತಾಲೂಕಿನ ನಾರೇಮದ್ದೇಪಲ್ಲಿ ಗ್ರಾಮದಲ್ಲಿ ಬತ್ತಿ ಹೋದ ಕೆರೆಯಲ್ಲಿ ಮುಸ್ಲಿಂ ಬಾಂಧವರು ನಮಾಜ್ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದಾರೆ. ಬತ್ತಿ ಹೋಗಿರುವ ಕೆರೆ ಅಂಗಳದಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ನಮಾಜ್ ಮಾಡಿ ಮಳೆಗಾಗಿ ಅಲ್ಲಾಹನಿಗೆ ಪ್ರಾರ್ಥನೆ ಸಲ್ಲಿಸಲಾಗಿದೆ. ಭಕ್ತಿಗೀತೆಗಳ ಮೂಲಕ ಮಳೆಗಾಗಿ ಬೇಡಿಕೊಂಡಿದ್ದಾರೆ. ಇದನ್ನೂ ಓದಿ: ಮುಳ್ಳಯ್ಯನಗಿರಿಯಲ್ಲಿ ನಿರಂತರ ಮಳೆಯಿಂದ ಗುಡ್ಡ ಕುಸಿತ – ಸ್ಥಳೀಯರಿಗೆ ಜಿಲ್ಲಾಡಳಿತ ಎಚ್ಚರಿಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನಲ್ಲಿ ಗರಿಷ್ಠ ಮಳೆ ಕೊರತೆ ಎದುರಾಗಿದೆ. ಮಳೆ ಕೊರತೆಯಿಂದ ಕೃಷಿ ಚಟುವಟಿಕೆ ಸಂಪೂರ್ಣ ಸ್ತಬ್ಧವಾಗಿದೆ. ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿದೆ. ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿದೆ. ಉತ್ತಮ ಮಳೆಯಾಗಿ ರೈತರ ಸಂಕಷ್ಟ ನಿವಾರಣೆಯಾಗಲಿ ಎಂದು ಗ್ರಾಮಸ್ಥರು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ನಾರಾಯಣಪುರ ಡ್ಯಾಮ್ನಿಂದ ಭಾರೀ ಪ್ರಮಾಣದ ನೀರು ಬಿಡುಗಡೆ – ಕಾಡ್ಲೂರಿನ ದೇವಸ್ಥಾನ ಜಲಾವೃತ