ನಾರಾಯಣಪುರ ಡ್ಯಾಮ್ನಿಂದ ಭಾರೀ ಪ್ರಮಾಣದ ನೀರು ಬಿಡುಗಡೆ – ಕಾಡ್ಲೂರಿನ ದೇವಸ್ಥಾನ ಜಲಾವೃತ
ರಾಯಚೂರು: ನಾರಾಯಣಪುರ ಜಲಾಶಯದಿಂದ (Narayanapura Dam) ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದ್ದು ರಾಯಚೂರಿನಲ್ಲಿ (Raichur) ಕೃಷ್ಣಾ ನದಿ (Krishna River) ಮೈದುಂಬಿ ಹರಿಯುತ್ತಿದೆ. ರಾಯಚೂರು ತಾಲೂಕಿನ ಕಾಡ್ಲೂರಿನಲ್ಲಿ ನದಿ ದಂಡೆಯಲ್ಲಿರುವ ಶ್ರೀಉಪೇಂದ್ರ ತೀರ್ಥ ಕರಾರ್ಚಿತ ಪ್ರಾಣದೇವರ ದೇವಸ್ಥಾನ ಈಗ ಜಲಾವೃತವಾಗಿದೆ. ದೇವಸ್ಥಾನಕ್ಕೆ ಭಕ್ತರು ತೆರಳದಂತೆ

ರಾಯಚೂರು: ನಾರಾಯಣಪುರ ಜಲಾಶಯದಿಂದ (Narayanapura Dam) ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದ್ದು ರಾಯಚೂರಿನಲ್ಲಿ (Raichur) ಕೃಷ್ಣಾ ನದಿ (Krishna River) ಮೈದುಂಬಿ ಹರಿಯುತ್ತಿದೆ. ರಾಯಚೂರು ತಾಲೂಕಿನ ಕಾಡ್ಲೂರಿನಲ್ಲಿ ನದಿ ದಂಡೆಯಲ್ಲಿರುವ ಶ್ರೀಉಪೇಂದ್ರ ತೀರ್ಥ ಕರಾರ್ಚಿತ ಪ್ರಾಣದೇವರ ದೇವಸ್ಥಾನ ಈಗ ಜಲಾವೃತವಾಗಿದೆ. ದೇವಸ್ಥಾನಕ್ಕೆ ಭಕ್ತರು ತೆರಳದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ. ಕೃಷ್ಣಾ ಮೇಲ್ಬಾಗದಲ್ಲಿ ಉತ್ತಮ ಮಳೆ ಹಿನ್ನೆಲೆ ಜಲಾಶಯ ಭರ್ತಿಯಾಗುವ ಹಂತದಲ್ಲಿದೆ. ಡ್ಯಾಮ್ ಭರ್ತಿಯಾಗಲು ಇನ್ನೂ ನಾಲ್ಕು ಟಿಎಂಸಿ ಮಾತ್ರ ಬಾಕಿಯಿದೆ. ಹೀಗಾಗಿ ಸದ್ಯ ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಜಲಾಶಯಕ್ಕೆ 1.1 ಲಕ್ಷ ಕ್ಯೂಸೆಕ್ ಒಳಹರಿವು ಇದೆ. ಇದನ್ನೂ ಓದಿ: ಮುಳ್ಳಯ್ಯನಗಿರಿಯಲ್ಲಿ ನಿರಂತರ ಮಳೆಯಿಂದ ಗುಡ್ಡ ಕುಸಿತ – ಸ್ಥಳೀಯರಿಗೆ ಜಿಲ್ಲಾಡಳಿತ ಎಚ್ಚರಿಕೆ ಆಲಮಟ್ಟಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹರಿದು ಬಂದರೆ ನಾರಾಯಣಪುರ ಜಲಾಶಯದ ಹೊರ ಹರಿವನ್ನೂ ಕ್ರಮೇಣ ಹೆಚ್ಚಿಸಲಾಗುತ್ತದೆ. ಈಗಾಗಲೇ ಲಿಂಗಸುಗೂರಿನ ಶೀಲಹಳ್ಳಿ ಸೇತುವೆ ಮುಳುಗಡೆ ಹಂತದಲ್ಲಿದೆ. ಇನ್ನೂ ಹೆಚ್ಚು ಪ್ರಮಾಣದ ನೀರು ಕೃಷ್ಣಾ ನದಿಗೆ ಹರಿದು ಬಂದರೆ ರಾಯಚೂರು, ಲಿಂಗಸುಗೂರು, ದೇವದುರ್ಗ ತಾಲೂಕಿನಲ್ಲಿ ಹಲವು ಸೇತುವೆಗಳು ಮುಳುಗಡೆಯಾಗಲಿವೆ. ಕೃಷ್ಣೇ ತುಂಬಿ ಹರಿಯುತ್ತಿರುವುದರಿಂದ ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಕೊಡಗು ಜಿಲ್ಲೆಯಾದ್ಯಂತ ಮಳೆ ಅರ್ಭಟ; ಹಾರಂಗಿ ಜಲಾಶಯದಿಂದ 13,000 ಕ್ಯೂಸೆಕ್ ನೀರು ರಿಲೀಸ್