ಇಂದು ಪ್ರಧಾನಿ ಮೋದಿ ಆಗಮನ – ಮೈಸೂರು ನಗರದಾದ್ಯಂತ ಪೊಲೀಸ್ ಕಟ್ಟೆಚ್ಚರ
ಮೈಸೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಮೈಸೂರಿಗೆ ಆಗಮಿಸಲಿದ್ದು, ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಉದ್ಘಾಟಿಸಲಿದ್ದಾರೆ. ಪ್ರಧಾನಿಗಳ ಭೇಟಿ ಹಿನ್ನೆಲೆ ಮೈಸೂರು ನಗರದಲ್ಲಿ (Mysuru City) ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರಧಾನಿ ಮೋದಿ ಅವರು ಸಂಚರಿಸುವ ಮಾರ್ಗಗಳಲ್ಲಿ ಖಾಕಿ ಪಡೆ ಕಟ್ಟೆಚ್

ಮೈಸೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಮೈಸೂರಿಗೆ ಆಗಮಿಸಲಿದ್ದು, ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಉದ್ಘಾಟಿಸಲಿದ್ದಾರೆ. ಪ್ರಧಾನಿಗಳ ಭೇಟಿ ಹಿನ್ನೆಲೆ ಮೈಸೂರು ನಗರದಲ್ಲಿ (Mysuru City) ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರಧಾನಿ ಮೋದಿ ಅವರು ಸಂಚರಿಸುವ ಮಾರ್ಗಗಳಲ್ಲಿ ಖಾಕಿ ಪಡೆ ಕಟ್ಟೆಚ್ಚರ ವಹಿಸಿದ್ದು, ಸಾರ್ವಜನಿಕರ ಸುರಕ್ಷತೆ ಹಾಗೂ ಭದ್ರತೆ (Security) ಗಮನದಲ್ಲಿಟ್ಟುಕೊಂಡು ಸಂಚಾರಕ್ಕೆ ತಾತ್ಕಾಲಿಕ ಸಾರ್ವಜನಿಕರಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಯಾವ್ಯಾವ ರಸ್ತೆಗಳಲ್ಲಿ ನಿರ್ಬಂಧ? ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಸಾರ್ವಜನಿಕರು ಹಾಗೂ ವಾಹನಗಳ ಸಂಚಾರವನ್ನ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಇಂದು ಮೈಸೂರಿಗೆ ಮೋದಿ ಆಗಮನ – ವಿವೇಕ ಸ್ಮಾರಕ ಲೋಕಾರ್ಪಣೆ * ಡಿಸಿ ಕಚೇರಿ ಜಂಕ್ಷನ್ನಿಂದ ಏಕಲವ್ಯ ವೃತ್ತದವರೆಗೆ * ಮುಡಾ ಜಂಕ್ಷನ್ನಿಂದ ಡಾ. ಪದ್ಮ ವೃತ್ತದವರೆಗೆ * ಪಡುವಾರಳ್ಳಿ ಜಂಕ್ಷನ್ನಿಂದ ಮೆಟ್ರೋಪೋಲ್ ವೃತ್ತದವರೆಗೆ * ರೈಲ್ವೆ ನಿಲ್ದಾಣ ಜಂಕ್ಷನ್ನಿಂದ ಆರ್ಟಿಒ ವೃತ್ತದವರೆಗೆ * ದಾಸಪ್ಪ ವೃತ್ತದಿಂದ ಹಸು-ಕರು ವೃತ್ತದವರೆಗೆ * ಆಕಾಶವಾಣಿ ವೃತ್ತದಿಂದ ಮಾಲ್ಗುಡಿ ಜಂಕ್ಷನ್ವರೆಗೆ ಈ ಮಾರ್ಗಗಳಲ್ಲಿ ಸಾರ್ವಜನಿಕರ ವಾಹನಗಳ ಓಡಾಟ ಹಾಗೂ ಪಾದಚಾರಿಗಳ ಸಂಚಾರಕ್ಕೂ ತಾತ್ಕಾಲಿಕ ನಿರ್ಬಂಧ ಜಾರಿಯಲ್ಲಿರುತ್ತದೆ. ನಗರದ ವಿವಿಧ ಭಾಗಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಭದ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಇದನ್ನೂ ಓದಿ: ಇಂದಿನಿಂದ ಜಾರಿಯಾಗಲಿದೆ ಈ 5 ಪ್ರಮುಖ ಬದಲಾವಣೆಗಳು – ಜೇಬಿಗೆ ಕತ್ತರಿ ಬೀಳೋದಂತೂ ಪಕ್ಕಾ! ಈ ಕುರಿತು ಮೈಸೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಹಾಗೂ ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.