ಪ್ರತಿಭಟನೆ ಭೀತಿಯಿಂದ ಸಿಜೆಐ ಮುಖ್ಯ ಅತಿಥಿಯಾಗಿದ್ದ ಕಾರ್ಯಕ್ರಮ ಮುಂದೂಡಿದ ಟಾಟಾ
ಮುಂಬೈ: ಆ.2ರಂದು ನಿಗದಿಯಾಗಿದ್ದ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ನ(ಟಿಐಎಸ್ಎಸ್) 86ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ಏಕಾಏಕಿ ಮುಂದೂಡಲಾಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಮುಖ್ಯ ಅತಿಥಿಯಾಗಿ ಮತ್ತು ಮುಂಬೈ ಹೈಕೋರ್ಟ್ನ ರವೀಂದ್ರ ಘುಗೆ ಅವರು ಗೌರವ ಅತಿಥಿಯಾಗಿ ಭಾಗವಹಿಸಬೇಕಿತ್ತು.ಸಮಾರಂಭಕ್ಕೂ ಕೇವಲ ಎರಡು ದಿ

ಮುಂಬೈ: ಆ.2ರಂದು ನಿಗದಿಯಾಗಿದ್ದ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ನ(ಟಿಐಎಸ್ಎಸ್) 86ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ಏಕಾಏಕಿ ಮುಂದೂಡಲಾಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಮುಖ್ಯ ಅತಿಥಿಯಾಗಿ ಮತ್ತು ಮುಂಬೈ ಹೈಕೋರ್ಟ್ನ ರವೀಂದ್ರ ಘುಗೆ ಅವರು ಗೌರವ ಅತಿಥಿಯಾಗಿ ಭಾಗವಹಿಸಬೇಕಿತ್ತು.ಸಮಾರಂಭಕ್ಕೂ ಕೇವಲ ಎರಡು ದಿನಗಳ ಮೊದಲು ಪದವಿ ಪಡೆಯುವ ವಿದ್ಯಾರ್ಥಿಗಳಿಗೆ ಇಮೇಲ್ ಕಳುಹಿಸಿರುವ ಸಂಸ್ಥೆಯ ರಿಜಿಸ್ಟ್ರಾರ್, ‘ಅನಿರೀಕ್ಷಿತ ಪರಿಸ್ಥಿತಿಗಳ’ ಕಾರಣದಿಂದ ಘಟಿಕೋತ್ಸವ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ. ಕಾರ್ಯಕ್ರಮದ ವೇಳೆ ಗಣ್ಯರನ್ನು ಗುರಿಯಾಗಿಸಿಕೊಂಡು ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಬಹುದು ಎಂಬ ಗುಪ್ತಚರ ಮಾಹಿತಿಯಿಂದ ಘಟಿಕೋತ್ಸವವನ್ನು ಮುಂದೂಡಲಾಗಿದೆ ಎಂದು ಸಂಸ್ಥೆಯ ಅಧಿಕಾರಿಗಳು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ತಿಳಿಸಿದ್ದಾರೆ.ಈ ರೀತಿಯ ಅನಾನುಕೂಲಕರ ವಾತಾವರಣದಲ್ಲಿ ಸಮಾರಂಭವನ್ನು ನಡೆಸಲು ಸಾಧ್ಯವಿಲ್ಲ. ಒಂದು ವೇಳೆ ನಿಗದಿತ ಸಮಯಕ್ಕೆ ಕಾರ್ಯಕ್ರಮವನ್ನು ನಡೆಸಿದರೆ ಅದು ಗಣ್ಯರು, ಅತಿಥಿಗಳು ಮತ್ತು ಶಿಕ್ಷಣ ಸಂಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಅದರೊಂದಿಗೆ ಸಂಸ್ಥೆಯ ಹಿತದೃಷ್ಟಿ ಹಾಗೂ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಘಟಿಕೋತ್ಸವವನ್ನು ಮುಂದೂಡುವ ಕಠಿಣ ನಿರ್ಧಾರವನ್ನು ಸಂಸ್ಥೆಯು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.ಸಮಾರಂಭದ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಮತ್ತು ತಕ್ಷಣ ಅಗತ್ಯವಿರುವವರಿಗೆ ತಾತ್ಕಾಲಿಕ ಪ್ರಮಾಣಪತ್ರಗಳನ್ನು ಒದಗಿಸಲಾಗುವುದು ಎಂದು ಆಡಳಿತ ಮಂಡಳಿಯು ವಿದ್ಯಾರ್ಥಿಗಳಿಗೆ ಭರವಸೆ ನೀಡಿದೆ.ಟಿಐಎಸ್ಎಸ್ ನಿರ್ಧಾರವನ್ನು ನೂರಾರು ಪದವೀಧರ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಖಂಡಿಸಿದ್ದು, ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈಗಾಗಲೇ ವಿಮಾನ, ರೈಲು ಮತ್ತು ಹೋಟೆಲ್ ಬುಕಿಂಗ್ ಮಾಡಿಕೊಂಡಿದ್ದೆವು ಎಂದು ನಿರಾಸೆ ವ್ಯಕ್ತಪಡಿಸಿದ್ದಾರೆ.