ಸಿಜೆಪಿ ಪ್ರತಿಭಟನೆ – ಪ್ರಚೋದನಾಕಾರಿ ವಿಷಯ ಹಂಚಿದ ಯೂಟ್ಯೂಬರ್, ಇನ್ಫ್ಲುಯೆನ್ಸರ್ಗಳ ವಿರುದ್ಧ ಕ್ರಮಕ್ಕೆ ದೆಹಲಿ ಪೊಲೀಸ್ ಸಜ್ಜು
ನವದೆಹಲಿ: ಜಂತರ್ ಮಂತರ್ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದ ಪ್ರತಿಭಟನೆಯ ಬಳಿಕ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹಾಗೂ ದ್ವೇಷಭರಿತ ವಿಷಯಗಳನ್ನು ಪ್ರಸಾರ ಮಾಡಿದ ಆರೋಪದಡಿ ಹಲವು ಯೂಟ್ಯೂಬರ್ಗಳು (Youtubers) ಮತ್ತು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಗಳ (Social Media Influencers) ವಿರುದ್ಧ ದೆಹಲಿ ಪೊಲೀಸರು ಕಾನೂನು ಕ್ರಮಕ್ಕೆ

ನವದೆಹಲಿ: ಜಂತರ್ ಮಂತರ್ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದ ಪ್ರತಿಭಟನೆಯ ಬಳಿಕ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹಾಗೂ ದ್ವೇಷಭರಿತ ವಿಷಯಗಳನ್ನು ಪ್ರಸಾರ ಮಾಡಿದ ಆರೋಪದಡಿ ಹಲವು ಯೂಟ್ಯೂಬರ್ಗಳು (Youtubers) ಮತ್ತು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಗಳ (Social Media Influencers) ವಿರುದ್ಧ ದೆಹಲಿ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರ (Delhi Police) ಸ್ಪೆಷಲ್ ಸೆಲ್ ನಡೆಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಷಯ ಪ್ರಸಾರ ಹಾಗೂ ಡಿಜಿಟಲ್ ಪ್ರಚಾರದಲ್ಲಿ ತೊಡಗಿರುವ ಮೂರು ಖಾಸಗಿ ಕಂಪನಿಗಳ ಚಟುವಟಿಕೆಗಳನ್ನೂ ಪರಿಶೀಲಿಸುತ್ತಿದೆ. ಪ್ರತಿಭಟನೆಗೆ ಸಂಬಂಧಿಸಿದ ಡಿಜಿಟಲ್ ಕಂಟೆಂಟ್ ಹರಡುವಿಕೆಯಲ್ಲಿ ಈ ಸಂಸ್ಥೆಗಳ ಪಾತ್ರವಿದೆಯೇ ಎಂಬುದನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ: ಎಂಎಲ್ಸಿ ಉಮಾಶ್ರೀ ಡಿಜಿಟಲ್ ಸಾಕ್ಷ್ಯಗಳ ಪರಿಶೀಲನೆ: ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸಾಮಾಜಿಕ ಜಾಲತಾಣ ಖಾತೆಗಳು ತನಿಖಾಧಿಕಾರಿಗಳ ನಿಗಾದಲ್ಲಿವೆ. ಹಿಂಸೆಗೆ ಪ್ರಚೋದನೆ ನೀಡುವ ಪೋಸ್ಟ್ಗಳು, ತಪ್ಪು ಮಾಹಿತಿ ಹರಡುವ ವೀಡಿಯೋಗಳು ಹಾಗೂ ಲೈವ್ ಪ್ರಸಾರಗಳನ್ನೂ ಡಿಜಿಟಲ್ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಪರಿಶೀಲಿಸುತ್ತಿದ್ದಾರೆ. ವದಂತಿಗಳನ್ನು ಹರಡುವುದು ಅಥವಾ ಹಿಂಸಾಚಾರಕ್ಕೆ ಜನರನ್ನು ಪ್ರಚೋದಿಸುವಲ್ಲಿ ಈ ಖಾತೆಗಳ ಪಾತ್ರವಿದೆಯೇ ಎಂಬುದನ್ನು ತನಿಖೆ ಮಾಡಲಾಗುತ್ತಿದೆ. ಪರಿಶೀಲನೆ ಪೂರ್ಣಗೊಂಡ ಬಳಿಕ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಈ ಪ್ರಕರಣದಲ್ಲಿ ಈಗಾಗಲೇ ಸುಮಾರು 180 ಸಾಮಾಜಿಕ ಜಾಲತಾಣ ಖಾತೆಗಳನ್ನು ಪೊಲೀಸರು ತನಿಖೆಯ ವ್ಯಾಪ್ತಿಗೆ ಒಳಪಡಿಸಿದ್ದಾರೆ. ಸಾಮಾನ್ಯ ಪ್ರತಿಭಟನಾಕಾರರಿಗೆ ಮಾತ್ರ ವಿನಾಯಿತಿ: ಈ ಬೆಳವಣಿಗೆಯ ನಡುವೆಯೇ ದೆಹಲಿ ಗೃಹ ಸಚಿವ ಆಶೀಷ್ ಸೂದ್, ಸಿಜೆಪಿ ಪ್ರತಿಭಟನೆಗೆ ಸಂಬಂಧಿಸಿದ ಎಫ್ಐಆರ್ಗಳನ್ನು ಹಿಂಪಡೆಯುವ ನಿರ್ಧಾರ ಎಲ್ಲರಿಗೂ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದೆಹಲಿ ಸರ್ಕಾರದ ಗೃಹ ಇಲಾಖೆಯ ಪ್ರಕಾರ, ಶಾಂತಿಯುತವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಾಮಾನ್ಯ ಪ್ರತಿಭಟನಾಕಾರರ ವಿರುದ್ಧ ಯಾವುದೇ ಪ್ರತಿಕೂಲ ಕಾನೂನು ಕ್ರಮ ಕೈಗೊಳ್ಳುವುದಿಲ್ಲ. ಆದರೆ, ಈಗಾಗಲೇ ಕ್ರಿಮಿನಲ್ ಹಿನ್ನೆಲೆ ಹೊಂದಿರುವವರು ಹಾಗೂ ಹಿಂಸಾಚಾರ ಅಥವಾ ಸಾರ್ವಜನಿಕ ಆಸ್ತಿ ಹಾನಿಯಲ್ಲಿ ಭಾಗಿಯಾಗಿರುವವರಿಗೆ ಈ ಸೌಲಭ್ಯ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ. ಈ ನಿರ್ಧಾರವು ಜುಲೈ 28ರಂದು ಸುಪ್ರೀಂ ಕೋರ್ಟ್ ನೀಡಿದ ಆದೇಶದ ಆಧಾರದಲ್ಲಿದ್ದು, ಅದಕ್ಕೆ ಅನುಗುಣವಾಗಿ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಗೃಹ ಇಲಾಖೆ ಹೇಳಿದೆ. ಆಶೀಷ್ ಸೂದ್ ಅವರ ಪ್ರಕಾರ, ಶಾಂತಿಯುತವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ವಿದ್ಯಾರ್ಥಿಗಳ ವಿರುದ್ಧವೂ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಆದರೆ, ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವವರು ಅಥವಾ ಹಿಂಸಾಚಾರದಲ್ಲಿ ತೊಡಗಿರುವವರಿಗೆ ಯಾವುದೇ ವಿನಾಯಿತಿ ದೊರೆಯುವುದಿಲ್ಲ ಎಂದರು. ಇದನ್ನೂ ಓದಿ: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಮೋದಿ 13 ಎಫ್ಐಆರ್ ದಾಖಲು: ಜುಲೈ 20ರಂದು ಸಿಜೆಪಿ ಆಯೋಜಿಸಿದ್ದ ‘ಚಲೋ ಸಂಸದ್’ ಪ್ರತಿಭಟನಾ ಮೆರವಣಿಗೆಯ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಒಟ್ಟು 13 ಎಫ್ಐಆರ್ಗಳನ್ನು ದಾಖಲಿಸಿದ್ದಾರೆ. ಇದಲ್ಲದೆ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವರ ಪೈಕಿ ಸುಮಾರು 2,800ಕ್ಕೂ ಹೆಚ್ಚು ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಗಳನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿರಪರಾಧ ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ ಮತ್ತು ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದಿಲ್ಲ ಎಂಬ ವಿಶ್ವಾಸ ಮೂಡಿಸುವ ಉದ್ದೇಶದಿಂದಲೇ ಸರ್ಕಾರ ಈ ಸ್ಪಷ್ಟನೆ ನೀಡಿದೆ ಎಂದು ಗೃಹ ಸಚಿವ ಆಶೀಷ್ ಸೂದ್ ಹೇಳಿದ್ದಾರೆ. ಇದನ್ನೂ ಓದಿ: ಭೋಗಾಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿ 17,900 ಕೋಟಿ ವೆಚ್ಚದ ಯೋಜನೆಗಳಿಗೆ ಮೋದಿ ಚಾಲನೆ