ಮೈಸೂರಿಗೆ ಮೋದಿ ಆಗಮನ – ವಿವೇಕ ಸ್ಮಾರಕ ಸುತ್ತಮುತ್ತಲಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ (Mysuru) ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸುತ್ತಿದ್ದಾರೆ. ಸ್ವಾಮಿ ವಿವೇಕಾನಂದರ (Swami Vivekananda) ಐತಿಹಾಸಿಕ ಭೇಟಿಯ ನೆನಪಿನಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಆಗಮಿಸುತ್ತಿದ್ದು, ಇಡೀ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಈ ಬೆನ್ನಲ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ (Mysuru) ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸುತ್ತಿದ್ದಾರೆ. ಸ್ವಾಮಿ ವಿವೇಕಾನಂದರ (Swami Vivekananda) ಐತಿಹಾಸಿಕ ಭೇಟಿಯ ನೆನಪಿನಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಆಗಮಿಸುತ್ತಿದ್ದು, ಇಡೀ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಈ ಬೆನ್ನಲ್ಲೇ ವಿವೇಕ ಸ್ಮಾಕರ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ವಿವೇಕ ಸ್ಮಾರಕ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮನದ ಹಿನ್ನೆಲೆ, ಸ್ಮಾರಕ ಸುತ್ತಮುತ್ತಲಿನ ಕೆಲ ಪ್ರದೇಶಗಳಲ್ಲಿ ಸಾರ್ವಜನಿರಕ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಆ ರಸ್ತೆಗಳಲ್ಲಿ ಸಂಪೂರ್ಣ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲಾಗಿದೆ. ಇದರೊಂದಿಗೆ ಸುತ್ತಮುತ್ತ ಪ್ರದೇಶಗಳಲ್ಲಿರುವ ಮಹಾರಾಣಿ ಶಾಲೆ, ಕಾಲೇಜು, ಮಹಾರಾಜ ಕಾಲೇಜು, ಮರಿಮಲ್ಲಪ್ಪ ಶಾಲೆ, ಕಾಲೇಜು, ಸದ್ವಿದ್ಯ ಶಾಲೆ, ರೋಟರಿ ವಿದ್ಯಾಸಂಸ್ಥೆಗೆ ರಜೆ ಘೋಷಣೆ ಮಾಡಲಾಗಿದೆ. ಯಾವ್ಯಾವ ರಸ್ತೆಗಳಲ್ಲಿ ನಿರ್ಬಂಧ? ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಸಾರ್ವಜನಿಕರು ಹಾಗೂ ವಾಹನಗಳ ಸಂಚಾರವನ್ನ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. * ಡಿಸಿ ಕಚೇರಿ ಜಂಕ್ಷನ್ನಿಂದ ಏಕಲವ್ಯ ವೃತ್ತದವರೆಗೆ * ಮುಡಾ ಜಂಕ್ಷನ್ನಿಂದ ಡಾ. ಪದ್ಮ ವೃತ್ತದವರೆಗೆ * ಪಡುವಾರಳ್ಳಿ ಜಂಕ್ಷನ್ನಿಂದ ಮೆಟ್ರೋಪೋಲ್ ವೃತ್ತದವರೆಗೆ * ರೈಲ್ವೆ ನಿಲ್ದಾಣ ಜಂಕ್ಷನ್ನಿಂದ ಆರ್ಟಿಒ ವೃತ್ತದವರೆಗೆ * ದಾಸಪ್ಪ ವೃತ್ತದಿಂದ ಹಸು-ಕರು ವೃತ್ತದವರೆಗೆ * ಆಕಾಶವಾಣಿ ವೃತ್ತದಿಂದ ಮಾಲ್ಗುಡಿ ಜಂಕ್ಷನ್ವರೆಗೆ ಸಾರ್ವಜನಿರಕ ಪ್ರವೇಶಕ್ಕೆ ನಿರ್ಬಂಧ ಇರಲಿದೆ. ಪ್ರಧಾನಿ ಮೈಸೂರಿನಿಂದ ವಾಪಸ್ ತೆರಳಿದ ಬಳಿಕ ಪ್ರವೇಶ ಕಲ್ಪಿಸಲಾಗುತ್ತದೆ. ಪ್ರವಾಸದ ವೇಳಾಪಟ್ಟಿ ಮಧ್ಯಾಹ್ನ 2:55 – ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮನ ಮಧ್ಯಾಹ್ನ 3:15 – ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ನಗರದ ಓವಲ್ ಮೈದಾನಕ್ಕೆ ಆಗಮನ ಮಧ್ಯಾಹ್ನ 3:25 – ಓವಲ್ ಮೈದಾನದಿಂದ ರಸ್ತೆ ಮಾರ್ಗವಾಗಿ ವಿವೇಕ ಸ್ಮಾರಕಕ್ಕೆ ತೆರಳಲಿರುವ ಮೋದಿ, ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ 5 ನಿಮಿಷಗಳ ಕಾಲ ಧ್ಯಾನ ಮಾಡಲಿದ್ದಾರೆ. ಮಧ್ಯಾಹ್ನ 3:30 – ಸಂಜೆ 5:15: ರಾಮಕೃಷ್ಣ ಆಶ್ರಮದ ಶಾಲಾ ಆವರಣದಲ್ಲಿ ನಡೆಯುವ ಪ್ರಮುಖ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿ ಸಂಜೆ 5:55 – ಮೈಸೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ನವದೆಹಲಿಗೆ ನಿರ್ಗಮನ