ಹಾವೇರಿ,ಧಾರವಾಡದಲ್ಲಿ ಹೆಚ್ಚಿದ ಚಳಿ ಪ್ರಮಾಣ; ಯಾವ ಊರಲ್ಲಿ ಎಷ್ಟು ಉಷ್ಣಾಂಶ
ಬೆಂಗಳೂರು: ಕರ್ನಾಟಕದಲ್ಲಿ ಮೂರು ದಿನಗಳಿಂದ ಮಳೆಯಾಗುತ್ತಿರುವ ಕಾರಣದಿಂದ ಹಲವು ಭಾಗದಲ್ಲಿ ಉಷ್ಣಾಂಶದಲ್ಲಿ ಕುಸಿತ ಕಂಡು ಬಂದಿದೆ.ಹಾವೇರಿ, ಧಾರವಾಡ, ಶಿವಮೊಗ್ಗದ ಆಗುಂಬೆ ಸೇರಿದಂತೆ ಹಲವು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಇಳಿಕೆಯಾಗಿದ್ದು, ಚಳಿಯ ಪ್ರಮಾಣ ಅಧಿಕವಾಗಿದೆ.ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಭಾನುವಾರದ ಉಷ್ಣಾಂಶದ ಪ್ರಕಾರ, ಹಾವೇರಿಯಲ್ಲಿ ಗರಿಷ್

ಬೆಂಗಳೂರು: ಕರ್ನಾಟಕದಲ್ಲಿ ಮೂರು ದಿನಗಳಿಂದ ಮಳೆಯಾಗುತ್ತಿರುವ ಕಾರಣದಿಂದ ಹಲವು ಭಾಗದಲ್ಲಿ ಉಷ್ಣಾಂಶದಲ್ಲಿ ಕುಸಿತ ಕಂಡು ಬಂದಿದೆ.ಹಾವೇರಿ, ಧಾರವಾಡ, ಶಿವಮೊಗ್ಗದ ಆಗುಂಬೆ ಸೇರಿದಂತೆ ಹಲವು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಇಳಿಕೆಯಾಗಿದ್ದು, ಚಳಿಯ ಪ್ರಮಾಣ ಅಧಿಕವಾಗಿದೆ.ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಭಾನುವಾರದ ಉಷ್ಣಾಂಶದ ಪ್ರಕಾರ, ಹಾವೇರಿಯಲ್ಲಿ ಗರಿಷ್ಠ 21. 6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಇದು ಸಾಮಾನ್ಯಕ್ಕಿಂತ 4.9 ಡಿಗ್ರಿ ಸೆಲ್ಸಿಯಸ್ ಕಡಿಮೆ. ಆಗುಂಬೆಯಲ್ಲಿ 23.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದ್ದರೆ, ಧಾರವಾಡದಲ್ಲಿ 26 ಡಿಗ್ರಿ ಸೆಲ್ಸಿಯಸ್ ಗೆ ಇಳಿಕೆಯಾಗಿದೆ.ಬೆಳಗಾವಿ ವಿಮಾನ ನಿಲ್ದಾಣದಲ್ಲಿ 26 ಡಿಗ್ರಿ ಸೆಲ್ಸಿಯಸ್, ಮಂಗಳೂರು ವಿಮಾನ ನಿಲ್ದಾಣದಲ್ಲಿ 27.5, ಮಂಗಳೂರು ನಗರದಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿತ್ತು. ಚಿತ್ರದುರ್ಗದಲ್ಲಿ 28 ಡಿಗ್ರಿ ಸೆಲ್ಸಿಯಸ್, ದಾವಣಗೆರೆಯಲ್ಲಿ 28.5 ಡಿಗ್ರಿ ಸೆಲ್ಸಿಯಸ್, ಮೈಸೂರಿನಲ್ಲಿ 28.2 ಡಿಗ್ರಿ ಸೆಲ್ಸಿಯಸ್, ಮಂಡ್ಯದಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿತ್ತು.ಬೆಂಗಳೂರು ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ಮ ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣ ಪ್ರದೇಶದಲ್ಲಿ 30.1, ಕೆಂಪೇಗೌಡ ವಿಮಾನ ನಿಲ್ದಾಣದ ಪ್ರದೇಶದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಯಿತು.ಚಿಂತಾಮಣಿ, ಕಾರವಾರ ಹಾಗೂ ಗದಗದಲ್ಲಿ 30.6 ಡಿಗ್ರಿ ಸೆಲ್ಸಿಯಸ್, ಹೊನ್ನಾವರದಲ್ಲಿ 31.1 ಡಿಗ್ರಿ ಸೆಲ್ಸಿಯಸ್, ಬೀದರ್ ನಲ್ಲಿ 31.5, ವಿಜಯಪುರದಲ್ಲಿ 32.5 ಡಿಗ್ರಿ ಸೆಲ್ಸಿಯಸ್, ಬಾಗಲಕೋಟೆಯಲ್ಲಿ 32.8 ಡಿಗ್ರಿ ಸೆಲ್ಸಿಯಸ್, ಕೊಪ್ಪಳದಲ್ಲಿ 32.5 ಡಿಗ್ರಿ ಸೆಲ್ಸಿಯಸ್, ಕಲಬುರಗಿ ಜಿಲ್ಲೆಯಲ್ಲಿ 33.2 ಡಿಗ್ರಿ ಸೆಲ್ಸಿಯಸ್, ರಾಯಚೂರು ಜಿಲ್ಲೆಯಲ್ಲಿ 34 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.