ಕಲಬುರಗಿಯ ಹಾಗರಗಾ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ
ಕಲಬುರಗಿ: ಪತಿ ಹೆಸರಿನಲ್ಲಿದ್ದ ಖಾಲಿ ನಿವೇಶನವನ್ನು ಪತ್ನಿ ಹೆಸರಿಗೆ ವರ್ಗಾಯಿಸಲು ₹9,950 ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.ತಾಲ್ಲೂಕಿನ ಹಾಗರಗಾ ಪಂಚಾಯಿತಿ ಕಾರ್ಯದರ್ಶಿ ವೇದಾಂಗ ಲೋಕಾ ಬಲೆಗೆ ಬಿದ್ದವರು.ಕಿಶನ ಪವಾರ ಅವರ ಹೆಸರಿನಲ್ಲಿ ಹಾಗರಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಜಾದಪುರ ಗ್ರಾಮ

ಕಲಬುರಗಿ: ಪತಿ ಹೆಸರಿನಲ್ಲಿದ್ದ ಖಾಲಿ ನಿವೇಶನವನ್ನು ಪತ್ನಿ ಹೆಸರಿಗೆ ವರ್ಗಾಯಿಸಲು ₹9,950 ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.ತಾಲ್ಲೂಕಿನ ಹಾಗರಗಾ ಪಂಚಾಯಿತಿ ಕಾರ್ಯದರ್ಶಿ ವೇದಾಂಗ ಲೋಕಾ ಬಲೆಗೆ ಬಿದ್ದವರು.ಕಿಶನ ಪವಾರ ಅವರ ಹೆಸರಿನಲ್ಲಿ ಹಾಗರಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಜಾದಪುರ ಗ್ರಾಮದಲ್ಲಿ ಸಂ.12 ಸರ್ವೆ ನಂ. 111/1ರಲ್ಲಿ ಖಾಲಿ ನಿವೇಶನ ಇತ್ತು. ಅವರು ಮೃತಪಟ್ಟಿದ್ದಾರೆ. ಅವರ ಹೆಸರಿನಲ್ಲಿದ್ದ ನಿವೇಶನ ಸದ್ಯ ಮುಂಬೈನಲ್ಲಿರುವ ಅವರ ಪತ್ನಿ ದಸ್ಮಾಬಾಯಿ ಕಿಶನ್ ಪವಾರ ಹೆಸರಿಗೆ ವರ್ಗಾಯಿಸುವಂತೆ ಅವರ ಅಳಿಯ ಸಂಜೀವ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ವೇದಾಂಗ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಸಂಜೀವ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರನ್ವಯ ಲೋಕಾಯುಕ್ತ ಎಸ್ಪಿ ಸಿ.ಸಿದ್ದರಾಜು ಮಾರ್ಗದರ್ಶನದಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ರವಿ ಪವಾರ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ
Read the complete story at Prajavani