ಹೈಕೋರ್ಟ್ನಿಂದ ಜೀವಾವಧಿ ಶಿಕ್ಷೆಗೆ ತಡೆ – ವಿನಯ್ ಕುಲಕರ್ಣಿ ಶಾಸಕ ಸ್ಥಾನ ಮರುಸ್ಥಾಪನೆ
ಧಾರವಾಡ/ಬೆಂಗಳೂರು: ಯೋಗೇಶ್ ಗೌಡ (Yogesh Gowda) ಕೊಲೆ ಕೇಸ್ನಲ್ಲಿ ವಿನಯ್ ಕುಲಕರ್ಣಿಗೆ (Vinay Kulkarni) ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಗೆ ಹೈಕೋರ್ಟ್ (High Court) ತಡೆ ನೀಡಿದ ಹಿನ್ನೆಲೆ ವಿಧಾನಸಭೆ ಕಾರ್ಯದರ್ಶಿಯವರು ಶಾಸಕ ಸ್ಥಾನ ಮರುಸ್ಥಾಪನೆ ಮಾಡುವುದಾಗಿ ಆದೇಶ ಹೊರಡಿಸಿದ್ದಾರೆ. ವಿಧಾನಸಭೆ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದು, ಕೋರ್ಟ್ನ ಮುಂದಿನ ಆ

ಧಾರವಾಡ/ಬೆಂಗಳೂರು: ಯೋಗೇಶ್ ಗೌಡ (Yogesh Gowda) ಕೊಲೆ ಕೇಸ್ನಲ್ಲಿ ವಿನಯ್ ಕುಲಕರ್ಣಿಗೆ (Vinay Kulkarni) ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಗೆ ಹೈಕೋರ್ಟ್ (High Court) ತಡೆ ನೀಡಿದ ಹಿನ್ನೆಲೆ ವಿಧಾನಸಭೆ ಕಾರ್ಯದರ್ಶಿಯವರು ಶಾಸಕ ಸ್ಥಾನ ಮರುಸ್ಥಾಪನೆ ಮಾಡುವುದಾಗಿ ಆದೇಶ ಹೊರಡಿಸಿದ್ದಾರೆ. ವಿಧಾನಸಭೆ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದು, ಕೋರ್ಟ್ನ ಮುಂದಿನ ಆದೇಶದವರೆಗೆ ವಿನಯ್ ಕುಲಕರ್ಣಿ ಅವರ ಅನರ್ಹತೆ ರದ್ದುಗೊಳಿಸಲಾಗುವುದು. ಜೊತೆಗೆ ಶಾಸಕ ಸ್ಥಾನ ಮರು ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಂಎಲ್ಎ ಆದ್ರೂ ಬಾಡಿಗೆ ಮನೆಯಲ್ಲೇ ವಾಸ – ಸಿಂಪಲ್ ಶಾಸಕ ಬಸವಂತಪ್ಪ ಈಗ ಮಿನಿಸ್ಟರ್ ಏನಿದು ಪ್ರಕರಣ? ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಅಮಾನತ್ತಿನಲ್ಲಿ ಇರಿಸಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ ನೀಡಿ, ವಿನಯ್ ಕುಲಕರ್ಣಿ ಸೇರಿ 10 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಇಬ್ಬರ ಶ್ಯೂರಿಟಿ, 5 ಲಕ್ಷ ರೂ. ಬಾಂಡ್ಗೆ ಕೋರ್ಟ್ಗೆ ಸೂಚಿಸಿದೆ. ಈ ಮೂಲಕ ಶಾಸಕ ಸ್ಥಾನ ಊರ್ಜಿತವಾಗಿದೆ.ಇದನ್ನೂ ಓದಿ: ನಾನು ನನ್ನ ಪದವಿ ಪ್ರಮಾಣಪತ್ರ ತೋರಿಸಲು ಸಿದ್ಧ, ಚಕ್ರವರ್ತಿ ತೋರಿಸಲು ಸಿದ್ಧವಿದ್ದಾರಾ?: ಮೋದಿಗೆ ಅಭಿಜಿತ್ ದೀಪ್ಕೆ ಪ್ರಶ್ನೆ 2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆಯಾಗಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಮೇಲೆ ಆರೋಪ ಕೇಳಿ ಬಂದಿತ್ತು. ಪ್ರಕರಣವನ್ನು ಬಿಜೆಪಿ ಸರ್ಕಾರ ಸಿಬಿಐಗೆ ಒಪ್ಪಿಸಿತ್ತು. ಇಂಚಿAಚು ತನಿಖೆ ನಡೆಸಿದ್ದ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿತ್ತು. 10 ವರ್ಷಗಳ ನಿರಂತರ ತನಿಖೆ, ವಿಚಾರಣೆ ಬಳಿಕ ಕೊಲೆ, ಕ್ರಿಮಿನಲ್ ಸಂಚು, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ, ಅಕ್ರಮ ಕೂಟ ಆರೋಪದಡಿ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿತ್ತು. ಸೋಮಶೇಖರ್ ನ್ಯಾಮಗೌಡ ಹಾಗೂ ವಾಸುದೇವ್ ನಿಲೇಕಣಿಯನ್ನ ಕೋರ್ಟ್ ಖುಲಾಸೆಗೊಳಿತ್ತು. ಇನ್ನು ಇಬ್ಬರು ನಿರ್ದೋಷಿಗಳನ್ನ ಬಿಟ್ಟು ಉಳಿದವರನ್ನು ಸಿಬಿಐ ವಶಕ್ಕೆ ಪಡೆದಿತ್ತು. ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ 17 ಅಪರಾಧಿಗಳ ವೈದ್ಯಕೀಯ ಪರೀಕ್ಷೆ ನಡೆಸಿ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು. 2026ರ ಏಪ್ರಿಲ್ 17 ರಂದು 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ವಿನಯ್ ಕುಲಕರ್ಣಿ ಸೇರಿ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಇನ್ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ, ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದರು.ಇದನ್ನೂ ಓದಿ: ಬಿಜೆಪಿ ಭದ್ರಕೋಟೆ ಛಿದ್ರ – ಬಂಕಿಪುರ ಉಪಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ಗೆ ಗೆಲುವು