Farming: ಅಣಬೆ ಬೇಸಾಯದಲ್ಲಿ ತೊಡಗಿಸಿಕೊಂಡು ಆದಾಯ ಗಳಿಸಬೇಕೇ, ಇಲ್ಲಿದೆ ಅವಕಾಶ
ಬೆಂಗಳೂರು: ನಿರುದ್ಯೋಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್ 17 ರಿಂದ 10 ದಿನಗಳ ಕಾಲ ಶಿಬಿರ ನಡೆಯಲಿದೆ.ಸ್ವಯಂ ಉದ್ಯೋಗಿಗಳಾಗಲು ಇಚ್ಛಿಸುವ 18 ರಿಂದ 50

ಬೆಂಗಳೂರು: ನಿರುದ್ಯೋಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್ 17 ರಿಂದ 10 ದಿನಗಳ ಕಾಲ ಶಿಬಿರ ನಡೆಯಲಿದೆ.ಸ್ವಯಂ ಉದ್ಯೋಗಿಗಳಾಗಲು ಇಚ್ಛಿಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರು ಆಗಸ್ಟ್ 13 ರಂದು ಬೆಳಿಗ್ಗೆ 10 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ಸೂಕ್ತ ದಾಖಲಾತಿಗಳೊಂದಿಗೆ ಹಾಜರಾಗಬಹುದು ಎಂದು ತಿಳಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8970476050, 6363139123, 9591514154, 9686248369 ಮತ್ತು 9886935603 ಗೆ ಸಂಪರ್ಕಿಸಬಹುದು ಎಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.