ಬಹಿರಂಗವಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ: ತನ್ವೀರ್ ಸೇಠ್ ಅಸಮಾಧಾನ
– ನಮ್ಮ ನಾಯಕರಿಂದ ನನಗೆ ಸಚಿವ ಸ್ಥಾನ ಕೈ ತಪ್ಪಿದೆ ಮೈಸೂರು: ಬಹಿರಂಗವಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂದು ತನ್ವೀರ್ ಸೇಠ್ (Tanveer Sait) ಅಸಮಾಧಾನ ಹೊರಹಾಕಿದ್ದಾರೆ. ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ (DK Shivakumar Cabinet Expansion) ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸೆ ನ

– ನಮ್ಮ ನಾಯಕರಿಂದ ನನಗೆ ಸಚಿವ ಸ್ಥಾನ ಕೈ ತಪ್ಪಿದೆ ಮೈಸೂರು: ಬಹಿರಂಗವಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂದು ತನ್ವೀರ್ ಸೇಠ್ (Tanveer Sait) ಅಸಮಾಧಾನ ಹೊರಹಾಕಿದ್ದಾರೆ. ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ (DK Shivakumar Cabinet Expansion) ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸೆ ನಿರಾಸೆ ಆಗಿದೆ. ರಾಹುಲ್ ಗಾಂಧಿಗೆ ಎಂಬ ಪದ ಬಳಕೆ ಮಾಡಿದ್ದಕ್ಕೆ ಕೆ.ಎನ್ ರಾಜಣ್ಣರನ್ನು ತಕ್ಷಣ ವಜಾ ಮಾಡಿದರು. ಮೈಸೂರು ಪ್ರಾಂತ್ಯಕ್ಕೆ ಸಿಗಬೇಕಾದ ಶಕ್ತಿ ಸಿಕ್ಕಿಲ್ಲ. ಇದು ಆಶಾದಾಯಕ ಪಟ್ಟಿಯಲ್ಲ. ಸಚಿವ ಸಂಪುಟಕ್ಕೆ ಆಯ್ಕೆಯಾದವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ ಈ ಭಾಗಕ್ಕೆ ದೊಡ್ಡ ಅನ್ಯಾಯವಾಗಿದೆ. ನನ್ನ ಅಭಿಮಾನಿಗಳು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ. ನನಗೆ ಸಿಗಬೇಕಾದ ಗೌರವ ಸಿಗಲಿಲ್ಲ ಎಂದರು. ಇದನ್ನೂ ಓದಿ: ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ – ಬ್ರಿಜ್ ಭೂಷಣ್ ಶರಣ್ ಸಿಂಗ್ ಖುಲಾಸೆ ಕಾರ್ಯಕರ್ತರು ಏನೂ ಹೇಳುತ್ತಾರೋ ಅದೇ ರೀತಿ ಮಾಡುತ್ತೇನೆ. ಯಾವ ಮಾನದಂಡದ ಮೇಲೆ ಸಚಿವ ಸಂಪುಟ ರಚನೆ ಆಗಿದೆ ಗೊತ್ತಿಲ್ಲ. ದಾವಣಗೆರೆ ಉಪ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದವರಿಗೂ ಸಚಿವ ಸ್ಥಾನ ಇಲ್ಲ. ಅಲ್ಲಿನ ಮಲ್ಲಿಕಾರ್ಜುನ ಖರ್ಗೆಗೂ ಇಲ್ಲ. ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನ ಸಿಗುತ್ತಿದೆ. ಪಕ್ಷಕ್ಕೆ ನಿಷ್ಠರಾಗಿದ್ದವರಿಗೆ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾತ್ರೋರಾತ್ರಿ ಲೇಡಿಸ್ ಪಿಜಿಗೆ ನುಗ್ಗಿದ ಕಳ್ಳ; ಲ್ಯಾಪ್ಟಾಪ್, ಸ್ಮಾರ್ಟ್ವಾಚ್ ಕದ್ದು ಪರಾರಿ ಇದರ ಹಿಂದೆ ಅನೇಕರ ಕೈ ಚಳಕ ಇದೆ. ಪಕ್ಷದಿಂದ ಕೈ ತಪ್ಪಿಲ್ಲ, ನಮ್ಮ ನಾಯಕರಿಂದ ನನಗೆ ಕೈ ತಪ್ಪಿದೆ. ಹೈಕಮಾಂಡ್ ಮೇಲೆ ಯಾವ ರೀತಿ ಚಾಡಿ ಹೇಳಲು ಏನೂ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ – ಖಾಸಗಿ ಅಂಗಕ್ಕೆ ರಾಡ್ ಹಾಕಿ ಬರ್ಬರ ಹತ್ಯೆ