ಪೊಲೀಸ್ ಪರೀಕ್ಷೆ ಬರೆದು ಮನೆಗೆ ಮರಳುತ್ತಿದ್ದ ಯುವಕ ರಸ್ತೆ ಅಪಘಾತದಲ್ಲಿ ಸಾವು
ಹಾಸನ: ಪೊಲೀಸ್ ಕಾನ್ಸ್ಟೇಬಲ್ ಆಗುವ ಕನಸು ಹೊತ್ತು ಪರೀಕ್ಷೆ ಬರೆದು ಮನೆಗೆ ಹಿಂದಿರುಗುತ್ತಿದ್ದ ಯುವಕ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಹಾಸನ (Hassan) ಜಿಲ್ಲೆಯ ಆಲೂರು ತಾಲೂಕಿನ ಕಾಗನೂರು ಗ್ರಾಮದಲ್ಲಿ ನಡೆದಿದೆ. 20 ವರ್ಷದ ಸಾಗರ್ಗೌಡ ಮೃತ ಯುವಕ. ಈತ ಹಾಸನದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು, ಪೊಲೀಸ್ ಇಲಾಖೆಗೆ ಸೇರುವ ಕನಸಿನೊಂದಿಗೆ ನಿನ್ನೆ ನಡೆ

ಹಾಸನ: ಪೊಲೀಸ್ ಕಾನ್ಸ್ಟೇಬಲ್ ಆಗುವ ಕನಸು ಹೊತ್ತು ಪರೀಕ್ಷೆ ಬರೆದು ಮನೆಗೆ ಹಿಂದಿರುಗುತ್ತಿದ್ದ ಯುವಕ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಹಾಸನ (Hassan) ಜಿಲ್ಲೆಯ ಆಲೂರು ತಾಲೂಕಿನ ಕಾಗನೂರು ಗ್ರಾಮದಲ್ಲಿ ನಡೆದಿದೆ. 20 ವರ್ಷದ ಸಾಗರ್ಗೌಡ ಮೃತ ಯುವಕ. ಈತ ಹಾಸನದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು, ಪೊಲೀಸ್ ಇಲಾಖೆಗೆ ಸೇರುವ ಕನಸಿನೊಂದಿಗೆ ನಿನ್ನೆ ನಡೆದ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆ ಬರೆದಿದ್ದ. ಪರೀಕ್ಷೆ ಮುಗಿಸಿ ಬೈಕ್ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಶೆಟ್ಟಿಹಳ್ಳಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸಾಗರ್ಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಇದನ್ನೂ ಓದಿ: ಸಮಂತಾ ಪ್ರೆಗ್ನೆನ್ಸಿ ಗ್ಲೋ ನೋಡಿ ನೆಟ್ಟಿಗರು ಫಿದಾ ಮಗ ಪೊಲೀಸ್ ಆಗಬೇಕು ಎಂಬ ಕನಸು ಕಂಡಿದ್ದ ಕುಟುಂಬಕ್ಕೆ ಈ ದುರ್ಘಟನೆ ದೊಡ್ಡ ಆಘಾತವಾಗಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಈ ಭೀಕರ ಅಪಘಾತದ ದೃಶ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಕಾಂಗ್ರೆಸ್ ಲೆಟರ್ಹೆಡ್ನಲ್ಲಿ ಸ್ಪೀಕರ್ ಹುದ್ದೆಗೆ ಹೆಸರು – ಕೆಟ್ಟ ಸಂಪ್ರದಾಯಕ್ಕೆ ಕಾಂಗ್ರೆಸ್ ನಾಂದಿ: ಸುರೇಶ್ ಕುಮಾರ್ ಆಕ್ಷೇಪ