ನಾಳೆ ರಾಜೀನಾಮೆ ಕೊಡ್ತೀನಿ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಳೂರು ಗೋಪಾಲಕೃಷ್ಣ ಆಕ್ರೋಶ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ (Cabinet Expansion) ಸ್ಥಾನ ಸಿಗದ ಹಿನ್ನೆಲೆ ಕಾಂಗ್ರೆಸ್ (Congress) ಶಾಸಕ ಬೇಳೂರು ಗೋಪಾಲಕೃಷ್ಣ, ನಾಳೆ ಬೆಳಗ್ಗೆ 10 ಗಂಟೆಗೆ ನಾನು ರಾಜೀನಾಮೆ ಕೊಡುತ್ತೇನೆ ಎಂದು ಹೇಳುವ ಮೂಲಕ ಗೋಪಾಲಕೃಷ್ಣ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸ್ಥಾನ ಹಂಚಿಕೆ ಬಗ್ಗೆ ಮಾತನಾಡಿದ ಅವರು, ಗಾಡ್ಫಾದರ್ ಇರುವವರಿಗೆ, ಪ್ರಭಾವ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ (Cabinet Expansion) ಸ್ಥಾನ ಸಿಗದ ಹಿನ್ನೆಲೆ ಕಾಂಗ್ರೆಸ್ (Congress) ಶಾಸಕ ಬೇಳೂರು ಗೋಪಾಲಕೃಷ್ಣ, ನಾಳೆ ಬೆಳಗ್ಗೆ 10 ಗಂಟೆಗೆ ನಾನು ರಾಜೀನಾಮೆ ಕೊಡುತ್ತೇನೆ ಎಂದು ಹೇಳುವ ಮೂಲಕ ಗೋಪಾಲಕೃಷ್ಣ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸ್ಥಾನ ಹಂಚಿಕೆ ಬಗ್ಗೆ ಮಾತನಾಡಿದ ಅವರು, ಗಾಡ್ಫಾದರ್ ಇರುವವರಿಗೆ, ಪ್ರಭಾವಿಗಳಿಗೆ ಮಾತ್ರ ಸಚಿವ ಸ್ಥಾನ ಸಿಗುತ್ತಾ ಎಂದು ಪ್ರಶ್ನಿಸಿದರು. ತಮಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಇದ್ದರೂ ಕೊನೆಯ ಕ್ಷಣದಲ್ಲಿ ಹೆಸರು ಕೈಬಿಟ್ಟಿರುವುದಾಗಿ ಅಸಮಾಧಾನ ಹೊರಹಾಕಿದರು. ʼನಿನ್ನೆಯವರೆಗೂ ಪಟ್ಟಿಯಲ್ಲಿ ನನ್ನ ಹೆಸರಿತ್ತು. ಈಗ ಏಕಾಏಕಿ ಕೈಬಿಟ್ಟಿದ್ದಾರೆ. ಈಗಾಗಲೇ ಎರಡು ಬಾರಿ ಸಚಿವರಾಗಿದ್ದವರಿಗೆ ಮತ್ತೆ ಅವಕಾಶ ಕೊಡ್ತೀರಾ? ಪ್ರಭಾವಿಗಳು, ಮಾಜಿ ಸಚಿವರು, ಮುಖ್ಯಮಂತ್ರಿಗಳ ಮಕ್ಕಳಿಗೆ ಮಾತ್ರ ಸಚಿವ ಸ್ಥಾನನಾ? ಕಾಂಗ್ರೆಸ್ನ ಹಲವು ಅಸಮಾಧಾನಿತ ಶಾಸಕರು ಸಂಪರ್ಕದಲ್ಲಿದ್ದಾರೆ. ನಾಳೆ ಎಲ್ಲರೂ ಸೇರಿ ಒಂದು ತೀರ್ಮಾನಕ್ಕೆ ಬರುತ್ತೇವೆ. ನಾನು ನಾಳೆ ಬೆಳಗ್ಗೆ 10 ಗಂಟೆಗೆ ರಾಜೀನಾಮೆ ನೀಡುತ್ತೇನೆ ಎಂದು ಬೇಳೂರು ಗೋಪಾಲಕೃಷ್ಣ ಹೇಳಿದರು.ಇದನ್ನೂ ಓದಿ: ಕಂಟೇನರ್ಗೆ ವೋಲ್ವೋ ಬಸ್ ಡಿಕ್ಕಿ – ಟೆಕ್ಕಿ ಸಾವು ಇದೇ ವೇಳೆ, ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮಂಕಾಳ್ ವೈದ್ಯರನ್ನು ನಡೆಸಿಕೊಂಡ ರೀತಿಯ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ ಅವರು, ಪಕ್ಷದೊಳಗಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನ ಹೊರಹಾಕಿದರು.ಇದನ್ನೂ ಓದಿ: ಸಚಿವ ಸ್ಥಾನ ಸಿಗದಿದ್ದಕ್ಕೆ ಪ್ರಿಯಾಕೃಷ್ಣ ಬೆಂಬಲಿಗರ ತೀವ್ರ ಆಕ್ರೋಶ