ಕೆಆರ್ಎಸ್ ಜಲಾಶಯಕ್ಕೆ 102 ಅಡಿ ನೀರು
ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯಕ್ಕೆ 32 ಸಾವಿರ ಕ್ಯುಸೆಕ್ಗೂ ಹೆಚ್ಚು ನೀರು ಹರಿದು ಬರುತ್ತಿದ್ದು, ಜಲಾಶಯದ ನೀರಿನ ಮಟ್ಟ ಸೋಮವಾರ ಸಂಜೆ ವೇಳೆಗೆ 102.09 ಅಡಿ (ಗರಿಷ್ಠ 124.80) ತಲುಪಿದೆ.ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಅಪಾರ ಪ್ರಮಾಣದ ನೀರು ಕೆಆರ್ಎಸ್ ಜಲಾಶಯಕ್ಕೆ ಹರಿದು ಬರುತ್ತಿದೆ. ಸದ್ಯ 24.492 (ಗರಿಷ್ಠ 49.45

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯಕ್ಕೆ 32 ಸಾವಿರ ಕ್ಯುಸೆಕ್ಗೂ ಹೆಚ್ಚು ನೀರು ಹರಿದು ಬರುತ್ತಿದ್ದು, ಜಲಾಶಯದ ನೀರಿನ ಮಟ್ಟ ಸೋಮವಾರ ಸಂಜೆ ವೇಳೆಗೆ 102.09 ಅಡಿ (ಗರಿಷ್ಠ 124.80) ತಲುಪಿದೆ.ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಅಪಾರ ಪ್ರಮಾಣದ ನೀರು ಕೆಆರ್ಎಸ್ ಜಲಾಶಯಕ್ಕೆ ಹರಿದು ಬರುತ್ತಿದೆ. ಸದ್ಯ 24.492 (ಗರಿಷ್ಠ 49.452) ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹವಾಗಿದೆ.ಜಲಾಶಯದಿಂದ ಕುಡಿಯುವ ಉದ್ದೇಶಕ್ಕೆ, ನದಿ ಮತ್ತು ನಾಲೆಗಳ ಮೂಲಕ 1884 ಕ್ಯುಸೆಕ್ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. ಕಳೆದ ವರ್ಷ ಇದೇ ಸಮಯದಲ್ಲಿ 122 ಅಡಿಗಳಷ್ಟು ನೀರಿನ ಸಂಗ್ರಹವಿತ್ತು ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
Read the complete story at Prajavani