ಎಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಅಭಿವೃದ್ಧಿ ಮಾಡುತ್ತೇನೆ: ರುದ್ರಪ್ಪ ಲಮಾಣಿ
ಹಾವೇರಿ: ನನಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಂತೋಷ ಆಗಿದೆ. ಎಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಅಭಿವೃದ್ಧಿ ಮಾಡುತ್ತೇನೆ ಎಂದು ರುದ್ರಪ್ಪ ಲಮಾಣಿ (Rudrappa Lamani) ಹೇಳಿದ್ದಾರೆ. ಡಿಕೆ ಶಿವಕುಮಾರ್ ಸಂಪುಟದಲ್ಲಿ (DK Shivakumar Cabinet) ಸಚಿವ ಸ್ಥಾನ ದೊರೆತ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೀಗ ನನಗೆ ಸಿಎಂ ಕಚೇರಿಯಿಂದ ಕರೆ ಬಂದಿದೆ.

ಹಾವೇರಿ: ನನಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಂತೋಷ ಆಗಿದೆ. ಎಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಅಭಿವೃದ್ಧಿ ಮಾಡುತ್ತೇನೆ ಎಂದು ರುದ್ರಪ್ಪ ಲಮಾಣಿ (Rudrappa Lamani) ಹೇಳಿದ್ದಾರೆ. ಡಿಕೆ ಶಿವಕುಮಾರ್ ಸಂಪುಟದಲ್ಲಿ (DK Shivakumar Cabinet) ಸಚಿವ ಸ್ಥಾನ ದೊರೆತ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೀಗ ನನಗೆ ಸಿಎಂ ಕಚೇರಿಯಿಂದ ಕರೆ ಬಂದಿದೆ. ನೀವು ಸ್ಪೀಕರ್ ಹುದ್ದೆಗೆ ರಾಜೀನಾಮೆ ನೀಡಿ ಎಂದು ಸೂಚನೆ ಬಂದಿದೆ. ಬೆಂಗಳೂರಿಗೆ ಹೊರಟ್ಟಿದ್ದೇನೆ. ಹಾವೇರಿ (Haveri) ಜಿಲ್ಲೆಯಿಂದ ಮೂರು ನಾಲ್ಕು ಶಾಸಕರು ಆಕಾಂಕ್ಷಿಯಾಗಿದ್ದರು. ಅದರಲ್ಲಿ ನನಗೆ ಸ್ಥಾನ ನೀಡಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟ ಸೇರಿದ್ದು ಸಂತೋಷ ಆಗಿದೆ. ಸಿದ್ದರಾಮಯ್ಯ ಮತ್ತು ಹೈಕಮಾಂಡ್ಗೆ ಧನ್ಯವಾದ ಎಂದರು. ಇದನ್ನೂ ಓದಿ: ಬಹಿರಂಗವಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ: ತನ್ವೀರ್ ಸೇಠ್ ಅಸಮಾಧಾನ ಇನ್ನು ಹಾವೇರಿ ಶಾಸಕ ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ಘೋಷಣೆ ಹಿನ್ನೆಲೆ ಹಾವೇರಿಯ ವಾಲ್ಮೀಕಿ ವೃತ್ತದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಸಿಎಂ ಡಿಕೆ ಶಿವಕುಮಾರ್ ಮತ್ತು ಹೈಕಮಾಂಡ್ ಪರವಾಗಿ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದ್ದಾರೆ. ಇದನ್ನೂ ಓದಿ: ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ – ಬ್ರಿಜ್ ಭೂಷಣ್ ಶರಣ್ ಸಿಂಗ್ ಖುಲಾಸೆ