ಸಿದ್ದರಾಮಯ್ಯಗೆ ಅಸಮಾಧಾನವಿಲ್ಲ: ಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ‘ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನವಿಲ್ಲ’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಿದ್ದರಾಮಯ್ಯ ಅವರು ಗೈರಾಗಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘139 ಶಾಸಕರೂ ಒಂದು ತಂಡವಾಗಿ ಕೆಲಸ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಅವರು ಯಾಕೆ ಅಸಮಾಧಾನಗೊಳ್ಳುತ್ತಾರೆ’ ಎಂದು ಪ್ರಶ್ನಿಸಿದರು.
ಬೆಂಗಳೂರು: ‘ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನವಿಲ್ಲ’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಿದ್ದರಾಮಯ್ಯ ಅವರು ಗೈರಾಗಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘139 ಶಾಸಕರೂ ಒಂದು ತಂಡವಾಗಿ ಕೆಲಸ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಅವರು ಯಾಕೆ ಅಸಮಾಧಾನಗೊಳ್ಳುತ್ತಾರೆ’ ಎಂದು ಪ್ರಶ್ನಿಸಿದರು.‘ನಾನು ಸೇರಿದಂತೆ ಎಲ್ಲರೂ ಸಿದ್ದರಾಮಯ್ಯನವರ ಕಡೆಯವರೆ. ನಾವು ಒಂದಾಗಿದ್ದೇವೆ, ಒಂದಾಗಿರುತ್ತೇವೆ, ಒಂದಾಗಿ ಹೋರಾಟ ಮಾಡುತ್ತೇವೆ. ನೀವು ಹೊಸದಾಗಿ ಹುಡುಕುತ್ತಿದ್ದೀರಿ. ಅನೇಕರು ಅವರನ್ನು ಭೇಟಿ ಮಾಡುತ್ತಿರುತ್ತಾರೆ. ಸಚಿವ ಸ್ಥಾನ ಸಿಗದವರ ಜತೆಗೂ ಅವರು ಮಾತನಾಡುತ್ತಿರುತ್ತಾರೆ. ಅವರು ನಮ್ಮ ಪಕ್ಷದ ಕೆಲಸವನ್ನು ಮಾಡುತ್ತಿದ್ದಾರೆ’ ಎಂದು ಅವರು ಹೇಳಿದರು.‘ಸಚಿವ ಸಂಪುಟ ವಿಸ್ತರಣೆ ಸಂಬಂಧ ನಾನು, ಸಿದ್ದರಾಮಯ್ಯ ಸೇರಿ ಚರ್ಚೆ ಮಾಡಿ ತೀರ್ಮಾನ ಮಾಡಿದ್ದೇವೆ. ಇಂದು ಅವರ ಜನ್ಮದಿನ. ಅವರಿಗೆ ನಾನು ಶುಭ ಕೋರಿದ್ದೇನೆ’ ಎಂದರು.‘ನೀವು ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದೀರಾ ಎಂದು ಕೇಳಿದಾಗ, ‘ಖಂಡಿತವಾಗಿ ಮಾತನಾಡಿದ್ದೇನೆ. ಒಟ್ಟು ಐದು ಬಾರಿ ಚರ್ಚೆ ಮಾಡಿದ್ದೇನೆ’ ಎಂದರು.