111 ತಾಲ್ಲೂಕುಗಳಲ್ಲಿ ಒಣಹವೆ: ತೀವ್ರ ಬರ
ಬೆಂಗಳೂರು: ‘ರಾಜ್ಯದಲ್ಲಿ ಬರ ಪರಿಸ್ಥಿತಿ ಮುಂದುವರಿದಿದ್ದು, ಉತ್ತರ ಕರ್ನಾಟಕ ಭಾಗದ 111 ತಾಲ್ಲೂಕುಗಳಲ್ಲಿ ನಾಲ್ಕು ವಾರಗಳಿಂದ ಒಣಹವೆ ಮುಂದುವರಿದಿದೆ’ ಎಂದು ಕಂದಾಯ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ತಿಳಿಸಿದರು.ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುತ್ತಿದೆ. ಕೆಲವು ಜಲಾ

ಬೆಂಗಳೂರು: ‘ರಾಜ್ಯದಲ್ಲಿ ಬರ ಪರಿಸ್ಥಿತಿ ಮುಂದುವರಿದಿದ್ದು, ಉತ್ತರ ಕರ್ನಾಟಕ ಭಾಗದ 111 ತಾಲ್ಲೂಕುಗಳಲ್ಲಿ ನಾಲ್ಕು ವಾರಗಳಿಂದ ಒಣಹವೆ ಮುಂದುವರಿದಿದೆ’ ಎಂದು ಕಂದಾಯ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ತಿಳಿಸಿದರು.ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುತ್ತಿದೆ. ಕೆಲವು ಜಲಾಶಯಗಳಿಗೆ ನೀರು ಹರಿದುಬರುತ್ತಿದೆ’ ಎಂದರು.‘ಕಾವೇರಿ ಜಲಾನಯನ ಪ್ರದೇಶದ ಮೂರು ಜಲಾಶಯಗಳಲ್ಲಿ ಶೇ 90ರಷ್ಟು ನೀರು ತುಂಬಿದೆ. ಕೆಆರ್ಎಸ್ ಜಲಾಶಯದಲ್ಲಿ ಒಳ ಹರಿವು ಹೆಚ್ಚಾಗಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಶೇ 90ರಷ್ಟು ನೀರು ತುಂಬುವ ಸಾಧ್ಯತೆ ಇದೆ’ ಎಂದರು.‘ಮಳೆ ಕೊರತೆ ಹೆಚ್ಚಾದಷ್ಟು ಬರದ ಪರಿಸ್ಥಿತಿ ಹೆಚ್ಚಾಗುತ್ತದೆ. ಹೀಗಾಗಿ, ಬರ ಘೋಷಣೆ ಮಾಡಬೇಕೆಂದು ಶಾಸಕರು ಮತ್ತು ಜನರು ಒತ್ತಾಯಿಸುತ್ತಿದ್ದಾರೆ. ಆದರೆ, ಕೇಂದ್ರದ 10 ನಿಯಮಗಳ ಪ್ರಕಾರ ಆಗಸ್ಟ್ ತಿಂಗಳ ಅಂತ್ಯದವರೆಗೆ ಬರ ಘೋಷಣೆ ಮಾಡಲು ಸಾಧ್ಯವಿಲ್ಲ. ಅವುಗಳನ್ನು ಸಡಿಲಿಸುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ’ ಎಂದರು.‘ರಾಜ್ಯದಲ್ಲಿ ಬರ ಪರಿಸ್ಥಿತಿ ರೆಡ್ ಝೋನ್, ಯೆಲ್ಲೋ ಝೋನ್ ಹೋಗಿರುವುದನ್ನು ಪರಿಶೀಲಿಸಲಾಗುವುದು. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ನಿರ್ಣಯ ತೆಗೆದುಕೊಳ್ಳುತ್ತೇವೆ. ಬರ ಕುರಿತಂತೆ ಸಂಪುಟ ಸಭೆಯಲ್ಲಿ ಪ್ರಾತ್ಯಕ್ಷಿಕೆ ನೀಡಲಾಗಿದೆ’ ಎಂದರು.