ಭಾರಿ ಮಳೆ: ಮಂಗಳೂರು, ಪುತ್ತೂರಿನ ಶಾಲಾ– ಕಾಲೇಜುಗಳಿಗೆ ನಾಳೆ ರಜೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 4ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಪುತ್ತೂರು ಉಪವಿಭಾಗದ ವ್ಯಾಪ್ತಿಯಲ್ಲಿ ಅಂಗನವಾಡಿಯಿಂದ ಪಿ.ಯು.ಕಾಲೇಜುಗಳವರೆಗೆ ಹಾಗೂ ಮಂಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ಪ್ರೌಢಶಾಲೆಗಳವರೆಗೆ ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಿದೆ.‘ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 4ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಪುತ್ತೂರು ಉಪವಿಭಾಗದ ವ್ಯಾಪ್ತಿಯಲ್ಲಿ ಅಂಗನವಾಡಿಯಿಂದ ಪಿ.ಯು.ಕಾಲೇಜುಗಳವರೆಗೆ ಹಾಗೂ ಮಂಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ಪ್ರೌಢಶಾಲೆಗಳವರೆಗೆ ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಿದೆ.‘ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಇದೇ 4ರಂದು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗಾಗಿ, ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲ್ಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐಗಳು ಮತ್ತು ಡಿಪ್ಲೊಮಾ ಕಾಲೇಜುಗಳಿಗೆ (ವಸತಿ ಶಾಲಾ ಕಾಲೇಜುಗಳೂ ಸೇರಿದಂತೆ) ರಜೆ ನೀಡಲಾಗಿದೆ.’‘ಮಂಗಳೂರು ಉಪವಿಭಾಗದ ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಮೂಲ್ಕಿ, ಉಳ್ಳಾಲ ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ) ರಜೆ ಘೋಷಿಸಲಾಗಿದೆ.’ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ದ 2005ರ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.