ನೂತನ ಸಚಿವರಾಗಿ ರುದ್ರಪ್ಪ ಲಮಾಣಿ ಪ್ರಮಾಣ ವಚನ – ಬೊಮ್ಮಾಯಿ ಅಭಿನಂದನೆ
ಹಾವೇರಿ: ಕರ್ನಾಟಕ ರಾಜ್ಯ ಸರ್ಕಾರದ ನೂತನ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರುದ್ರಪ್ಪ ಲಮಾಣಿ (Rudrappa Lamani) ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೃತ್ಪೂರ್ವಕ ಅಭಿನಂದನೆ ಹಾಗೂ ಶುಭಾಶಯಗಳನ್ನು ಕೋರಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರ

ಹಾವೇರಿ: ಕರ್ನಾಟಕ ರಾಜ್ಯ ಸರ್ಕಾರದ ನೂತನ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರುದ್ರಪ್ಪ ಲಮಾಣಿ (Rudrappa Lamani) ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೃತ್ಪೂರ್ವಕ ಅಭಿನಂದನೆ ಹಾಗೂ ಶುಭಾಶಯಗಳನ್ನು ಕೋರಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರುದ್ರಪ್ಪ ಲಮಾಣಿ ಅವರು ಸಚಿವರಾಗಲು ಅಗತ್ಯ ನೆರವು, ಸಹಕಾರ, ಪ್ರೋತ್ಸಾಹ ಹಾಗೂ ಬೆಂಬಲ ನೀಡಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಬೊಮ್ಮಾಯಿ ಅವರು ತಮ್ಮ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಇದರ ಜೊತೆಗೆ ಹಾವೇರಿ ಜಿಲ್ಲೆಯ ಜನತೆಗೆ ಹಾಗೂ ವಿಶೇಷವಾಗಿ ಹಾವೇರಿ ವಿಧಾನಸಭಾ ಕ್ಷೇತ್ರದ ಎಲ್ಲ ಮತದಾರರಿಗೆ ತಮ್ಮ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಇದನ್ನೂ ಓದಿ: ಡಿಕೆ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು ಅಭಿವೃದ್ಧಿಯ ನಿರೀಕ್ಷೆ: ನೂತನ ಸಚಿವ ಸ್ಥಾನದ ಜವಾಬ್ದಾರಿಯಿಂದ, ತಮಗೆ ದೊರೆಯುವ ಇಲಾಖೆಯ ಮೂಲಕ ಹಾಗೂ ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯದ ಮತ್ತು ವಿಶೇಷವಾಗಿ ಹಾವೇರಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂಬ ಆಶಯ ಹಾಗೂ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ಪರೀಕ್ಷೆ ಬರೆದು ಮನೆಗೆ ಮರಳುತ್ತಿದ್ದ ಯುವಕ ರಸ್ತೆ ಅಪಘಾತದಲ್ಲಿ ಸಾವು ಮುಂದಿನ ದಿನಗಳಲ್ಲಿ ರಾಜ್ಯದ ಜನತೆಯ ಸಹಕಾರದೊಂದಿಗೆ ಹೆಚ್ಚಿನ ಉತ್ಸಾಹದಿಂದ ಸಾರ್ವಜನಿಕ ಸೇವೆ ಸಲ್ಲಿಸಲು ನೂತನ ಸಚಿವರಿಗೂ ಹಾಗೂ ಅವರ ಕುಟುಂಬ ವರ್ಗದವರಿಗೂ ದೇವರು ಉತ್ತಮ ಆರೋಗ್ಯ, ದೀರ್ಘಾಯುಷ್ಯ, ಸುಖ, ಶಾಂತಿ, ಸಮೃದ್ಧಿ ಮತ್ತು ನೆಮ್ಮದಿಯ ಜೀವನವನ್ನು ಕರುಣಿಸಲಿ ಎಂದು ಈ ಮೂಲಕ ಹಾರೈಸಿದ್ದಾರೆ. ಇದನ್ನೂ ಓದಿ: ಖರ್ಗೆ ತವರು ಜಿಲ್ಲೆಗೆ ಜಾಕ್ಪಾಟ್; ಅಜಯ್ ಸಿಂಗ್ಗೆ ಸಚಿವ ಸ್ಥಾನ, ಭಾವುಕರಾಗಿ ಕಣ್ಣೀರಿಟ್ಟ ತಾಯಿ