ಭಿಕ್ಷುಕನಿಗೆ ಒದ್ದ ಬಸ್ ಕಂಡಕ್ಟರ್ ಅಮಾನತು
ಬೆಂಗಳೂರು: ನೆಲಮಂಗಲದ ಅರಿಶಿನಕುಂಟೆಯಲ್ಲಿರುವ ರಾಜ್ಯ ರಸ್ತೆ ಸಾರಿಗೆ ಬಸ್ ನಿಲ್ದಾಣದ ಬಳಿ ಬಸ್ ಹತ್ತಲು ಪ್ರಯತ್ನಿಸುತ್ತಿದ್ದ ಭಿಕ್ಷುಕರೊಬ್ಬರಿಗೆ ಬಿಎಂಟಿಸಿ ನಿರ್ವಾಹಕರೊಬ್ಬರು ಒದ್ದಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಚಾಲಕರು ಮತ್ತು ನಿರ್ವಾಹಕರು ಪ್ರಯಾಣಿಕರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು, ಕಿರುಕುಳ ನೀಡಬಾರದು’ ಎಂದು ಸಾರಿಗೆ ಸಚಿವ ಬೈರತಿ ಸುರೇಶ್

ಬೆಂಗಳೂರು: ನೆಲಮಂಗಲದ ಅರಿಶಿನಕುಂಟೆಯಲ್ಲಿರುವ ರಾಜ್ಯ ರಸ್ತೆ ಸಾರಿಗೆ ಬಸ್ ನಿಲ್ದಾಣದ ಬಳಿ ಬಸ್ ಹತ್ತಲು ಪ್ರಯತ್ನಿಸುತ್ತಿದ್ದ ಭಿಕ್ಷುಕರೊಬ್ಬರಿಗೆ ಬಿಎಂಟಿಸಿ ನಿರ್ವಾಹಕರೊಬ್ಬರು ಒದ್ದಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಚಾಲಕರು ಮತ್ತು ನಿರ್ವಾಹಕರು ಪ್ರಯಾಣಿಕರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು, ಕಿರುಕುಳ ನೀಡಬಾರದು’ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಎಚ್ಚರಿಕೆ ನೀಡಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ.ದ್ವಿಚಕ್ರ ವಾಹನ ಸವಾರರೊಬ್ಬರ ಹೆಲ್ಮೆಟ್ ಕ್ಯಾಮೆರಾದಲ್ಲಿ ಸೆರೆಯಾದ ಈ ದೃಶ್ಯದಲ್ಲಿ, ಭಿಕ್ಷುಕರಿಗೆ ಬಸ್ನ ಫುಟ್ಬೋರ್ಡ್ ಮೇಲೆ ನಿಂತಿದ್ದ ನಿರ್ವಾಹಕರು ಒದ್ದಿರುವುದು ಕಂಡುಬಂದಿದೆ. ಹಲ್ಲೆಗೊಳಗಾದವರು ಓಡಿಹೋದರೂ ನಿರ್ವಾಹಕರು ಬೆನ್ನಟ್ಟಿಕೊಂಡು ಹೋಗುವುದು ವಿಡಿಯೊದಲ್ಲಿ ಕಾಣುತ್ತದೆ. ಸ್ವಲ್ಪ ಸಮಯದ ನಂತರ, ಆ ಭಿಕ್ಷುಕ ರಸ್ತೆಯ ಮೇಲೆ ಕುಸಿದುಬಿದ್ದು ಅಲುಗಾಡದಂತೆ ಮಲಗಿದ್ದರೂ, ನಿರ್ವಾಹಕರು ಸಹಾಯ ಮಾಡದೆ ಬಸ್ ಹತ್ತಿ ತೆರಳಿದ್ದಾರೆ.ಎರಡು ದಿನಗಳ ಹಿಂದಿನ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆಯೇ ನಿರ್ವಾಹಕರ ವರ್ತನೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.ಅಮಾನತು: ‘ಈ ಘಟನೆಯ ಬೆನ್ನಲ್ಲೇ ನಿರ್ವಾಹಕ ಕೃಷ್ಣಮೂರ್ತಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಇಲಾಖಾ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ಘಟನೆಯ ಸಮಗ್ರ ತನಿಖೆ ನಡೆಸಲಾಗುವುದು’ ಎಂದು ಬಿಎಂಟಿಸಿ ತಿಳಿಸಿದೆ.‘ಪ್ರಯಾಣಿಕರ ಸುರಕ್ಷತೆ, ಘನತೆ ಮತ್ತು ಗೌರವಯುತ ಸೇವೆಗೆ ಮೊದಲ ಆದ್ಯತೆ ನೀಡಲಾಗುವುದು. ಸಂಸ್ಥೆಯ ಸಿಬ್ಬಂದಿ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಬಾರದು. ಸಂಸ್ಥೆಯ ಸೇವಾಮೌಲ್ಯಗಳಿಗೆ ಬದ್ಧರಾಗಿರಲು ಸೂಚಿಸಲಾಗಿದೆ’ ಎಂದು ತಿಳಿಸಿದೆ.