ಸಚಿವ ಸ್ಥಾನ ಸಿಗದಿದ್ದಕ್ಕೆ ಬಹಳ ನೋವಾಗಿದೆ; ಶಾಸಕ ರಹೀಂ ಖಾನ್
ಬೀದರ್: ‘ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೆ ಬಹಳ ನೋವಾಗಿದೆ’ ಎಂದು ಶಾಸಕ ರಹೀಂ ಖಾನ್ ಅಳಲು ತೋಡಿಕೊಂಡರು.ನಗರದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಮತದಾರರ ಪ್ರಾಬಲ್ಯ ಇದೆ. ಈ ಭಾಗದ ಮುಸ್ಲಿಂ ಸಮುದಾಯವನ್ನು ಕಡೆಗಣಿಸಲಾಗಿದೆ. ಅಲ್ಪಸಂಖ್ಯಾತರು ಯಾವಾಗಲೂ ಕಾಂಗ್ರೆಸ್ ಪರವಾಗಿಯೇ ಇದ್ದಾರೆ ಎಂದು ತಿ
ಬೀದರ್: ‘ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೆ ಬಹಳ ನೋವಾಗಿದೆ’ ಎಂದು ಶಾಸಕ ರಹೀಂ ಖಾನ್ ಅಳಲು ತೋಡಿಕೊಂಡರು.ನಗರದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಮತದಾರರ ಪ್ರಾಬಲ್ಯ ಇದೆ. ಈ ಭಾಗದ ಮುಸ್ಲಿಂ ಸಮುದಾಯವನ್ನು ಕಡೆಗಣಿಸಲಾಗಿದೆ. ಅಲ್ಪಸಂಖ್ಯಾತರು ಯಾವಾಗಲೂ ಕಾಂಗ್ರೆಸ್ ಪರವಾಗಿಯೇ ಇದ್ದಾರೆ ಎಂದು ತಿಳಿಸಿದರು. ಈ ಬೆಳವಣಿಗೆಯಿಂದ ಮುಸ್ಲಿಂ ಸಮುದಾಯ ಕಾಂಗ್ರೆಸ್ ಪಕ್ಷದ ವಿರುದ್ಧ ಅಸಮಾಧಾನಗೊಂಡಿದೆ. ನನಗಾಗಿರುವ ನೋವಿನ ಕುರಿತು ನಮ್ಮ ಪಕ್ಷದ ಮುಖಂಡರೊಂದಿಗೆ ಚರ್ಚಿಸುತ್ತೇನೆ. ಉತ್ತರ ಕರ್ನಾಟಕದಲ್ಲಿ ಸಾಮಾನ್ಯ ವರ್ಗದ ಏಳು ಜನರಿಗೆ ಸಚಿವ ಸ್ಥಾನ ಕೊಡಲಾಗಿದೆ. ಮುಸ್ಲಿಂ ಸಮುದಾಯಕ್ಕೂ ಕೊಡಬಹುದಿತ್ತು ಎಂದರು
Read the complete story at Prajavani