ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ – ಉದಯನಿಧಿ ಸ್ಟಾಲಿನ್ ಅರೆಸ್ಟ್
– ನಾನು ತಪ್ಪೇ ಮಾಡಿಲ್ಲ ಎಂದ ಉದಯನಿಧಿ ಚೆನ್ನೈ: ನಟಿ ತ್ರಿಷಾ (Trisha) ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ನಡುವೆಯೇ ತಮಿಳುನಾಡು (Tamil Nadu) ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (Udayanidhi Stalin) ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಕಾವೇರಿ ಜಲ ವಿವಾದದ ಕುರಿತು ಭಾಷಣ ಮಾಡುವ ವೇಳೆ ನೀಡಿದ ಹೇಳಿಕೆ ರಾಜಕೀಯ

– ನಾನು ತಪ್ಪೇ ಮಾಡಿಲ್ಲ ಎಂದ ಉದಯನಿಧಿ ಚೆನ್ನೈ: ನಟಿ ತ್ರಿಷಾ (Trisha) ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ನಡುವೆಯೇ ತಮಿಳುನಾಡು (Tamil Nadu) ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (Udayanidhi Stalin) ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಕಾವೇರಿ ಜಲ ವಿವಾದದ ಕುರಿತು ಭಾಷಣ ಮಾಡುವ ವೇಳೆ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕಾವೇರಿ ನೀರಿನ ವಿಚಾರದಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಸರ್ಕಾರವನ್ನು ಟೀಕಿಸುತ್ತಿದ್ದ ವೇಳೆ ಉದಯನಿಧಿ ನೀಡಿದ ಹೇಳಿಕೆಯನ್ನು ಹಲವರು ನಟಿ ತ್ರಿಷಾ ಅವರನ್ನು ಉಲ್ಲೇಖಿಸಿ ಮಾಡಿದ ದ್ವಂದ್ವಾರ್ಥದ ಮಾತು ಎಂದು ಆರೋಪಿಸಿದ್ದರು. ಈ ಕುರಿತು ಟಿವಿಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಕ್ರಮಕ್ಕೆ ಒತ್ತಾಯಿಸಿದ್ದವು.ಇದನ್ನೂ ಓದಿ: ತ್ರಿಷಾ ವಿರುದ್ಧ ಉದಯನಿಧಿ ವಿವಾದಾತ್ಮಕ ಹೇಳಿಕೆ; ಮಹಿಳಾ ಆಯೋಗದ ಮೊರೆ ಹೋದ ಟಿವಿಕೆ ಪ್ರಕರಣ ದಾಖಲಿಸಿದ ಕೆಲವೇ ಹೊತ್ತಿನಲ್ಲಿ ಪೊಲೀಸರು ಉದಯನಿಧಿ ಅವರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಬಂಧನದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಉದಯನಿಧಿ, ನಾನು ಯಾವುದೇ ತಪ್ಪು ಮಾಡಿಲ್ಲ. ನಾನು ಮುಖ್ಯಮಂತ್ರಿಯನ್ನು ಬಿಟ್ಟರೆ ಬೇರೆ ಯಾರ ಹೆಸರನ್ನೂ ಹೇಳಿಲ್ಲ. ಇದು ರಾಜಕೀಯ ಪ್ರತೀಕಾರದ ಕ್ರಮ. ಈ ವಿಚಾರದ ಅಂತಿಮ ತೀರ್ಪನ್ನು ನ್ಯಾಯಾಲಯವೇ ನೀಡಲಿದೆ ಎಂದು ಪ್ರತಿಕ್ರಿಯಿಸಿದ್ದಾರೆ.ಇದನ್ನೂ ಓದಿ: ಶಾಲೆಯ ಒಳಗಡೆ 30 ಸೆಕೆಂಡ್ನಲ್ಲಿ 34 ಬಾರಿ ಶಿಕ್ಷಕಿಯನ್ನು ಇರಿದು ಕೊಂದ ಏನಿದು ವಿವಾದ? ತಂಜಾವೂರಿನಲ್ಲಿ ಕಾವೇರಿ ನೀರಿನ ಬಿಕ್ಕಟ್ಟಿನ ಕುರಿತು ನಡೆದ ಡಿಎಂಕೆ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತಿದ್ದ ಉದಯನಿಧಿ ಸ್ಟಾಲಿನ್, ನಮ್ಮ ಮುಖ್ಯಮಂತ್ರಿ ಕಾವೇರಿ ನೀರಿನ ವಿಷಯದ ಬಗ್ಗೆ ಬಾಯಿ ತೆರೆಯುತ್ತಿಲ್ಲ. ಅವರ ಏಕೈಕ ಚಿಂತೆ ಡಿಎಂಕೆ ವಿರುದ್ಧ ಸುಳ್ಳು ಪ್ರಕರಣಗಳನ್ನು ಹೇಗೆ ಹಾಕುವುದು ಎಂಬುದು ಅಷ್ಟೇ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ವಿಜಯ್ ಸರ್ಕಾರವನ್ನು ಟೀಕಿಸುತ್ತಿದ್ದರು. ಇದೇ ವೇಳೆ ಜನಸಮೂಹದಿಂದ ‘ತ್ರಿಷಾ… ತ್ರಿಷಾ…’ ಎಂಬ ಘೋಷಣೆಗಳು ಕೇಳಿಬಂದವು. ಅದಕ್ಕೆ ಪ್ರತಿಕ್ರಿಯಿಸಿದ ಉದಯನಿಧಿ, ನಗುಮುಖದೊಂದಿಗೆ ತಮಿಳಿನಲ್ಲಿ ದ್ವಂದ್ವಾರ್ಥ ಬರುವ ರೀತಿಯಲ್ಲಿ ʼಯಾವ ನೀರು ಬರುತ್ತದೋ ಇಲ್ಲವೋ, ಆ ನೀರು ಬರಲೇಬೇಕುʼ ಎಂದು ಹೇಳಿದರು. ಈ ಮಾತು ನಟಿ ತ್ರಿಷಾ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿ, ಮಹಿಳೆಯನ್ನು ಅವಮಾನಿಸುವ ಹಾಗೂ ಅಶ್ಲೀಲ ಅರ್ಥ ನೀಡುವ ರೀತಿಯಲ್ಲಿದೆ ಎಂದು ಟಿವಿಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಆರೋಪಿಸಿವೆ.